janadhvani

Kannada Online News Paper

ಬಕ್ರಿದ್ ಮಾರ್ಗಸೂಚಿ ಪಾಲಿಸಲು ಚಿಕ್ಕಮಗಳೂರು ಜಾಮಿಯಾ ಕಂಜುಲಿಮಾನ್ ಮನವಿ

ಚಿಕ್ಕಮಗಳೂರು ಹಾಗು ರಾಜ್ಯಾದ್ಯಂತ ಆಗಸ್ಟ್ 01 ರಂದು ಬಕ್ರಿದ್ ಹಬ್ಬ ಆಚರಿಸಲಾಗುತಿದ್ದು ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಸರ್ಕಾರವು ನಿರ್ಬಂಧ ಹೇರಲಾಗಿದೆ ಈ ನಿಟ್ಟನಲ್ಲಿ ಮುಸ್ಲಿಮರು ಸರ್ಕಾರದ ಮಾರ್ಗಸೂಚಿ ಪಾಲಿಸಿ ಸಹಕರಿಸಬೇಕು ಎಂದು ಸಂಸ್ಥೆ ಅಧ್ಯಕ್ಷ
ಹಾಗು ಕರ್ನಾಟಕ ಮುಸ್ಲಿಂ ಜಮಾತ್ ಜಿಲ್ಲಾ ಅದ್ಯಕ್ಷರೋ ಆದ ಹಾಜಿ ಮೊಹಮ್ಮದ್ ಶಾಹಿದ್ ರಜ್ವಿ ರವರು ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಪ್ರಧಾನ ಕಾರ್ಯದರ್ಶಿ ಹಾಜಿ ಫೈರೋಜ್ ಅಹಮದ್ ರಜ್ವಿ ರವರು ಮಸೀದಿಗಳಲ್ಲಿ ಒಂದು ಬಾರಿಗೆ 50 ಜನರು ಮಾತ್ರ ಸಾಮೂಹಿಕವಾಗಿ ಪ್ರಾರ್ಥನೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಅಧಿಕ ಜನರು ಬಂದಲ್ಲಿ ಎರಡು ಅಥವ ಮೂರು ಬ್ಯಾಚ್ ಗಳಲ್ಲಿ ಪ್ರಾರ್ಥನೆ ಮಾಡುವಂತೆ ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಹಜ್ ಹಾಗು ವಕ್ಫ್ ಇಲಾಖೆ ಸೂಚಿಸಿದೆ ಎಂದು ತಿಳಿಸಿದರು
ಮಸೀದಿಗಳನ್ನು ಹೊರತು ಪಡಿಸಿ ಸಭಾಂಗಣ,ಸಮುದಾಯ ಭವನ,ಶಾದಿ ಮಹಲ್ ಮತ್ತಿತರ ಜಾಗಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧಿಸಲಾಗಿದೆ ಮುಸ್ಲಿಮರು ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.

ಸಾಮೂಹಿಕ ಪ್ರಾರ್ಥನೆಗೆ ಮಾರ್ಗಸೂಚಿ
ಇದಕ್ಕೆ ಸಂಬಂಧಿಸಿದಂತೆ ಇಂದು 29/07/2020 ರಂದು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವರ ಕಚೇರಿಯಲ್ಲಿ ಜಿಲ್ಲಾಮಟ್ಟದ ಶಾಂತಿಸಭೆಯನ್ನು ಕರೆಯಲಾಯಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸುಮಾರು 50 ಕ್ಕೂ ಹೆಚ್ಚು ಮುಸ್ಲಿಂ ಧಾರ್ಮಿಕ ಮುಖಂಡರು ಪಾಲ್ಗೊಂಡಿದ್ದರು ಈ ಸಭೆಯಲ್ಲಿ ಕೋರೋಣ ಜಾಗೃತಿಗೆ ಬೇಕಾದಂತಹ ಎಲ್ಲ ಸೌಕರ್ಯಗಳನ್ನು ವ್ಯವಸ್ಥೆ ಮಾಡಿಕೊಳ್ಳುವುದರ ಜೊತೆಗೆ ಪೋಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಅಧಿಕಾರಿಗಳಿಗೆ ಮುಸ್ಲಿಂ ಮುಖಂಡರು ಭರವಸೆ ನೀಡಿದರು.

ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಮೊದಲು ಆಡಳಿತ ಮಂಡಳಿಗಳು ಈ ಮಾರ್ಗಸೂಚಿಗಳನ್ನು ಅನುಸರಿಸಲು ಸೂಚಿಸಲಾಗಿದೆ ಪ್ರಾರ್ಥನಾ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು 60 ವರ್ಷ ವಯಸ್ಸು ಮೆಲ್ಪಟ್ಟ ವ್ಯಕ್ತಿಗಳು ಹಾಗು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮಸೀದಿಗೆ ಬರಬಾರದು ಇವರುಗಳು ಮನೆಯಲ್ಲೇ ನಮಾಜ್ ನಿರ್ವಹಿಸುವುದು.

ನಮಾಜ್ ನಿರ್ವಹಿಸುವರ ಮಧ್ಯೆ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳುವುದು ಮಸೀದಿಗೆ ಪ್ರವೇಶಿಸುವ ಮುನ್ನ ಪ್ರತಿಯೊಬ್ಬರೂ ತಮ್ಮ ತಮ್ಮ ದೇಹದ ತಾಪಮಾನವನ್ನು ತಪಾಸಣೆಗೆ ಒಳಪಡಿಸಬೇಕು ಕೈಗಳನ್ನು ಸೋಪಿನಿಂದ ಶುಚಿಗೊಳಿಸಿಕೊಳ್ಳಬೇಕು ಮಸೀದಿ ಒಳಗಿರುವ ಧಾರ್ಮಿಕ ಗ್ರಂಥಗಳನ್ನು ಮತ್ತು ಇತರೇ ವಸ್ತುಗಳನ್ನು ಸ್ಪರ್ಷಿಸದಿರುವುದು ಹಸ್ತಲಾಘವ ಅಥವಾ ಆಲಿಂಗನ ಮಾಡಿಕೊಳ್ಳದಂತೆ ನಿಗ ವಹಿಸುವುದು ಅಪರಿಚತರು ಮಸೀದಿಗೆ ಬಂದಲ್ಲಿ ಅವರ ಬಗ್ಗೆ ವಿಶೇಷವಾಗಿ ಗಮನ ಹರಿಸುವುದು ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.

error: Content is protected !! Not allowed copy content from janadhvani.com