janadhvani

Kannada Online News Paper

ಬಕ್ರೀದ್: ರಾಷ್ಟ್ರಪತಿ, ಪ್ರಧಾನಿಯಿಂದ ಶುಭಾಶಯ

ನವದೆಹಲಿ: ತ್ಯಾಗ ಮತ್ತು ಬಲಿದಾನದ ಸಂಕೇತ ಮುಸ್ಲಿಮರ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ಬಕ್ರೀದ್ ಹಬ್ಬವನ್ನು ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಬಹಳ ಸರಳ ರೀತಿಯಲ್ಲಿ ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಎಲ್ಲರಿಗೂ ಈದ್ ಉಲ್ ಅದ್ ಹಾ ಹಬ್ಬದ ಶುಭಾಷಯಗಳು. ಈ ಹಬ್ಬ ತ್ಯಾಗ ಮತ್ತು ಸೌಹಾರ್ದತೆಯ ಮನೋಭಾವವನ್ನು ಸಂಕೇತಿಸುತ್ತದೆ. ಒಬ್ಬರು ಎಲ್ಲರ ಯೋಗಕ್ಷೇಮಕ್ಕಾಗಿ ಚಿಂತಿಸಲು ನಮಗೆ ಪ್ರೇರಣೆ ನೀಡುತ್ತದೆ. ಈ ಸಂದರ್ಭದಲ್ಲಿ ನಾವು ನಮ್ಮ ಸಂತೋಷವನ್ನು ಹಂಚಿಕೊಳ್ಳೋಣ, ಕೊರೋನಾ ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಸರ್ಕಾರ ಮಾರ್ಗಸೂಚಿಗಳು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳೋಣ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಎಲ್ಲರಿಗೂ ಈದ್ ಉಲ್ ಅದ್ ಹಾ ಹಬ್ಬದ ಶುಭಾಷಯಗಳು. ನ್ಯಾಯಯುತ ಸಾಮರಸ್ಯ ಮತ್ತು ಸಮಾಜವನ್ನು ಒಟ್ಟುಗೂಡಿಸಲು ಈ ದಿನ ನಮಗೆ ಪ್ರೇರಣಾದಾಯಕವಾಗಲಿ. ಎಲ್ಲರಲ್ಲೂ ಸಹೋದರತ್ವ ಮತ್ತು ಸಹಾನುಭೂತಿಯ ಮನೋಭಾವವನ್ನು ಹೆಚ್ಚಿಸಲಿ ಎಂದು ತಿಳಿಸಿದ್ದಾರೆ.

error: Content is protected !! Not allowed copy content from janadhvani.com