ಬೆಂಗಳೂರು: ಸಿಎಂ ಯಡಿಯೂರಪ್ಪರಿಗೆ ಕೊರೊನಾ ಸೋಂಕು ತಗುಲಿರುವುದು ಧೃಡಪಟ್ಟಿದೆ. ಈ ವಿಷಯವನ್ನು ಸ್ವತಃ ಅವರೇ ತಮ್ಮ ಅಧಿಕೃತ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.
ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ.
— B.S. Yediyurappa (@BSYBJP) August 2, 2020
“ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.
ಈಗ ಅವರ ಸಹೋದ್ಯೋಗಿ ಶಾಸಕರು ಹಾಗೂ ಸಚಿವರು ಬಿಎಸ್ವೈ ಅವರಿಗೆ ಶೀಘ್ರ ಗುಣಮುಖವಾಗಲಿ ಎಂದು ಹಾರೈಸಿದ್ದಾರೆ. ರಾಜ್ಯದ ವೈದಕೀಯ ಸಚಿವ ಡಾ.ಸುಧಾಕರ್.ಕೆ “ಹುಟ್ಟು ಹೋರಾಟಗಾರರು, ಜನನಾಯಕರು, ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ @BSYBJP ರವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಆದಷ್ಟು ಬೇಗನೆ ಅವರು ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯದ ಜನತೆಯ ಹಾರೈಕೆ, ಪ್ರಾರ್ಥನೆಗಳು ನಿಮ್ಮೊಂದಿಗಿದೆ. ಶೀಘ್ರದಲ್ಲಿ ಚೇತರಿಸಿಕೊಂಡು ಮತ್ತೆ ಎಂದಿನಂತೆ ಕರ್ತವ್ಯದಲ್ಲಿ ತೊಡಗಿಕೊಳ್ಳಲಿದ್ದೀರಿ ಎಂದು ಟ್ವೀಟ್ ಮಾಡಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ