janadhvani

Kannada Online News Paper

ಅನ್​ಲಾಕ್ ಪರಿಣಾಮ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 21ಲಕ್ಷಕ್ಕೆ ಏರಿಕೆ

ನವದೆಹಲಿ, ಆ.9: ದೇಶದಲ್ಲಿ ಭಾನುವಾರ ಕೊರೊನಾ ಸೋಂಕಿನ ಪ್ರಕರಣಗಳ ಒಟ್ಟು ಸಂಖ್ಯೆ 21 ಲಕ್ಷ ದಾಟಿದೆ.
ದೇಶದಲ್ಲಿ ಸೋಂಕಿನ ಸಂಖ್ಯೆ 21,53,010ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 43,379ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಒಂದೇ ದಿನದಲ್ಲಿ 64,399 ಸೋಂಕಿನ ಪ್ರಕರಣ ದಾಖಲಾಗಿದ್ದು, 861 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಂಕಿ ಅಂಶ ತಿಳಿಸಿದೆ.

ಕೊರೋನಾ ಕಡಿಮೆ ಇದ್ದಾಗ ಲಾಕ್​ಡೌನ್ ಮಾಡಿ ತೀವ್ರಗೊಂಡಾಗ‌ ಅನ್​ಲಾಕ್ ಮಾಡಿದ ಪರಿಣಾಮ ದೇಶದಲ್ಲಿ ಕೊರೋನಾ ಸೋಂಕು ಏರಿಕೆಯಾಗಿದೆ.ಅದೂ ಅಲ್ಲದೆ ಮೂರನೇ ಹಂತದ ಅನ್​ಲಾಕ್​‌ ಕೂಡ ಜಾರಿ ಆಗುತ್ತಿದ್ದಂತೆ ಪ್ರತಿ ದಿನವೂ ಅರ್ಧ ಲಕ್ಷಕ್ಕೂ ಹೆಚ್ಚು ಸೋಂಕು ಪೀಡಿತರು ಕಾಣಿಸಿಕೊಳ್ಳುತ್ತಿದ್ದರು. ಈಗ 60 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ.

ಭಾರತದಲ್ಲಿ ಜುಲೈ 1 ರಂದು 19 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 10ರಂದು 27 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 20 ರಿಂದ 37 ಸಾವಿರಕ್ಕೂ ಪ್ರಕರಣಗಳು ಪತ್ತೆಯಾಗಿದ್ದವು. ಬಳಿಕ ಆಗಸ್ಟ್ 1 ರಂದು 54,736 ಪ್ರಕರಣಗಳು, ಆಗಸ್ಟ್ 2ರಂದು 52,972 ಪ್ರಕರಣಗಳು, ಆಗಸ್ಟ್ 3 ರಂದು 52,050 ಪ್ರಕರಣಗಳು, ಆಗಸ್ಟ್ 4 ರಂದು 52,509 ಪ್ರಕರಣಗಳು ವರದಿಯಾಗಿದ್ದವು.

ಈಗ ಮತ್ತೆ ಹೆಚ್ಚಾಗಿ ಆಗಸ್ಟ್ 5ರಂದು 56,282, ಆಗಸ್ಟ್ 6 ರಂದು 62,538 ಮತ್ತು ಆಗಸ್ಟ್ 7ರಂದು 61,537 ಪ್ರಕರಣಗಳು ಗೋಚರಿಸಿದ್ದವು. ಆಗಸ್ಟ್ 8 ರಂದು 64,399 ಕಂಡು ಬಂದಿದ್ದು ದೇಶದ ಕೊರೋನಾ ಪೀಡಿತರ ಸಂಖ್ಯೆ 21,53,011ಕ್ಕೆ ಏರಿಕೆಯಾಗಿದೆ.
ಇದಲ್ಲದೆ ಶನಿವಾರ 861 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 43 ಸಾವಿರದ ಗಡಿ‌ ದಾಟಿದ್ದು 43,379ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 14,80,885 ಜನ ಮಾತ್ರ. ದೇಶದಲ್ಲಿ ಇನ್ನೂ 6,28,747 ಜನರಲ್ಲಿ ಕೊರೋನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

error: Content is protected !! Not allowed copy content from janadhvani.com