janadhvani

Kannada Online News Paper

ನಾಳೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ಮಧ್ಯಾಹ್ನ 3 ಗಂಟೆಯ ಬಳಿಕ ಈ ಸಾಲಿನ ಎಸ್ಸೆಸೆಲ್ಸಿ ಪರೀಕ್ಷಾ ಫಲಿತಾಂಶ ವೆಬ್ಸೈಟ್ ಗಳಲ್ಲಿ ಪ್ರಕಟವಾಗಲಿದೆ. ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಫಲಿತಾಂಶ ಪ್ರಕಟಿಸುವ ಮುನ್ನ ಸುದ್ದಿ ಗೋಷ್ಠಿಯನ್ನು ನಡೆಸಲಿದ್ದಾರೆ.

ಫಲಿತಾಂಶವು karresults.nic.in ಮತ್ತು kseeb.kar.nic.in ಜಾಲ ತಾಣಗಳಲ್ಲಿ ಪ್ರಕಟವಾಗಲಿದ್ದು ವಿದ್ಯಾರ್ಥಿಗಳ ಪೋಷಕರ ಮೊಬೈಲ್ ಸಂಖ್ಯೆಗೂ ಎಸ್ಸೆಮ್ಮೆಸ್ ಮೂಲಕ ಫಲಿತಾಂಶ ಲಭ್ಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.