janadhvani

Kannada Online News Paper

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಶೇ. 71.80 ತೇರ್ಗಡೆ- ಆರು ಮಂದಿ ಟಾಪ್ಟರ್

ಬೆಂಗಳೂರು,ಆ.10: ಕರ್ನಾಟಕ ಎಸ್ಎಸ್ಎಲ್ ಸಿ ಫಲಿತಾಂಶಗಳು ಪ್ರಕಟವಾಗಿದ್ದು, ಈ ಬಾರಿ ಶೇ.71.80 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿದುಬಂದಿದೆ.ಈ ಬಗ್ಗೆ ಇಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.

ರಾಜ್ಯಾದ್ಯಂತ 8, 48, 203 ವಿದ್ಯಾರ್ಥಿಗಳು ಪರೀಕ್ಷೆ ನೋಂದಾಯಿಸಿಕೊಂಡಿದ್ದು, ಈ ಪೈಕಿ 8,11,050 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 19, 086 ವಿದ್ಯಾರ್ಥಿಗಳ ಕೊರತೆಯುಂಟಾಗಿತ್ತು. ರಾಜ್ಯಾದ್ಯಂತ 34 ಶೈಕ್ಷಣಿಕ ಜಿಲ್ಲೆಗಳ 22 ಕೇಂದ್ರಗಳಲ್ಲಿ ಮೌಲ್ಯಮಾಪನ ಮಾಡಲಾಗಿತ್ತು ಎಂದು ಹೇಳಿದರು. ಕೊರೊನಾ ಸೋಂಕಿನ ಭೀತಿಯಿಂದ 18,067 ವಿದ್ಯಾರ್ಥಿಗಳು ಮೊದಲು ಪರೀಕ್ಷೆ ಬರೆಯದೆ, ಪೂರಕ ಪರೀಕ್ಷೆಗೆ ಹಾಜರಾಗಿದ್ದರು. 227 ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಿತು. 52,219 ಮೌಲ್ಯಮಾಪಕರು ಉತ್ತರಪತ್ರಿಕೆಗಳ ಮೌಲ್ಯಮಾಪನ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.

ಈ ವರ್ಷ ಶೇ.71.80 ಮಂದಿ ಅಂದರೆ 5, 82, 314 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕಳೆದ ವರ್ಷ 73.70 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ಬಾರಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದ್ದು, ಬೆಂಗಳೂರು ಗ್ರಾಮಾಂತರ ದ್ವಿತೀಯ ಮಧುಗಿರಿ ತೃತೀಯ, ಮಂಡ್ಯ ಜಿಲ್ಲೆಗೆ ನಾಲ್ಕನೇ ಸ್ಥಾನ ಲಭಿಸಿದೆ. ಯಾದಗಿರಿ ಕೊನೆಯ ಸ್ಥಾನ ಲಭಿಸಿದೆ. 2, 28, 734 ವಿದ್ಯಾರ್ಥಿಗಳು ಅನುತೀರ್ಣರಾಗಿದ್ದಾರೆ.

ಈ ಪೈಕಿ ಸರ್ಕಾರಿ ಶಾಲೆಗಳ ಶೇ.72.79 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅನುದಾನಿತ ಶಾಲೆಗಳ ಶೇ. 70.60 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅನುದಾನ ರಹಿತ ಶಾಲೆಗಳ ಶೇ.83.12ಮಂದಿ ವಿದ್ಯಾರ್ಥಿಗಲು ಉತ್ತೀರ್ಣರಾಗಿದ್ದಾರೆ.

ಪ್ರತೀ ಬಾರಿಯಂತೆಯೂ ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ ಸಾಧಿಸಿದ್ದಾರೆ. ಈ  ಬಾರಿ ಶೇ.66.41 ಬಾಲಕರು ಉತ್ತೀರ್ಣರಾಗಿದ್ದು, ಶೇ.77.74ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದಾರೆ.  6 ಮಂದಿ ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿದ್ದು,  ಕಳೆದ ಬಾರಿ ಇಬ್ಬರು ಮಾತ್ರ ಈ ಸಾಧನೆ ಗೈದಿದ್ದರು.ಅಂತೆಯೇ ಈ ಬಾರಿ 11 ಮಂದಿ 625ಕ್ಕೆ 624 ಅಂಕಗಳನ್ನು ಪಡೆದಿದ್ದು, ಕಳೆದ ಬಾರಿ 11 ಇಷ್ಚು ಅಂಕಗಳಿಸಿದ್ದರು. 

ಇನ್ನು ನಗರ ಪ್ರದೇಶದಲ್ಲಿ ಶೇ.73.41 ರಷ್ಟು ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಗ್ರಾಮೀಣ ಭಾಗದ ಶೇ.77.18 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅಂತೆಯೇ ಕನ್ನಡ ಮಾಧ್ಯಮದ ಶೇ. 70.49 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು. ಆಂಗ್ಲ ಮಾಧ್ಯಮದ ಶೇ.84.98 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಟಾಪರ್ಸ್: ಈ ಬಾರಿ ಆರು ಮಂದಿ ಟಾಪ್ಟರ್​ಗಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸನ್ನಿಧಿ ಮಹಾಬಲೇಶ್ವರ್ ಹೆಗಡೆ, ಬೆಂಗಳೂರಿನ ನಾಗಸಂದ್ರದ ಚಿರಾಯು ಕೆಎಸ್, ಬೆಂಗಳೂರಿನ ಸದಾಶಿವನಗರದ ನಿಖಿಲೇಶ್ ಮರಳಿ, ಮಂಡ್ಯದ ದುದ್ದದ ಧೀರಜ್ ರೆಡ್ಡಿ, ದಕ್ಷಿಣ ಕನ್ನಡ ಜಿಲ್ಲೆಯ ಅನುಷಾ ಎಎಲ್, ಚಿಕ್ಕಮಗಳೂರಿನ ತನ್ಮಯಿ ಅವರು ಶೇ. 100ರಷ್ಟು ಅಂಕ ಗಳಿಸಿದ ಸಾಧನೆ ಮಾಡಿದ್ದಾರೆ.

ಜಿಲ್ಲಾವಾರು ಶ್ರೇಣಿ:

ಈ ಬಾರಿ 10 ಜಿಲ್ಲೆಗಳು ಪರೀಕ್ಷೆಯ ಫಲಿತಾಂಶದಲ್ಲಿ ಎ ಗ್ರೇಡ್ ಪಡೆದಿವೆ. ನಾಲ್ಕು ಜಿಲ್ಲೆಗಳು ಸಿ ಗ್ರೇಡ್ ಪಡೆದರೆ ಉಳಿದ 20 ಜಿಲ್ಲೆಗಳಿಗೆ ಬಿ ಗ್ರೇಡ್ ಕೊಡಲಾಗಿದೆ.ಎ ಗ್ರೇಡ್ ಪಡೆದ 10 ಜಿಲ್ಲೆಗಳು:
1) ಚಿಕ್ಕಬಳ್ಳಾಪುರ
2) ಬೆಂಗಳೂರು ಗ್ರಾಮಾಂತರ
3) ಮಧುಗಿರಿ
4) ಮಂಡ್ಯ
5) ಚಿತ್ರದುರ್ಗ
6) ಕೋಲಾರ
7) ಉಡುಪಿ
8) ರಾಮನಗರ
9) ಹಾಸನ
10) ಉತ್ತರ ಕನ್ನಡ

ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾದ ಬಳಿಕ ಫಲಿತಾಂಶವನ್ನು ನೀವು kseeb.kar.nic.in ಅಥವಾ karresults.nic.in. ವೆಬ್ಸೈಟ್ನಲ್ಲಿ ವೀಕ್ಷಿಸಬಹುದು. ಇದಷ್ಟೇ ಅಲ್ಲದೆ, examresults.net ಮತ್ತು indiaresults.com ವೆಬ್ಸೈಟ್ನಲ್ಲಿ ಕೂಡ ರಿಸಲ್ಟ್ ನೋಡಬಹುದು.

examresults.net ವೆಬ್ಸೈಟ್ನಲ್ಲಿ ನಿಮ್ಮ ಫಲಿತಾಂಶವನ್ನು ವೀಕ್ಷಿಸಲು ಇಲ್ಲಿದೆ ಸುಲಭ ವಿಧಾನ.

ಮೊದಲು examresults.net ವೆಬ್ಸೈಟ್ಗೆ ಹೋಗಿ.

ಹೋಂ ಪೇಜ್ನಲ್ಲಿ ಎಸ್ಎಸ್ಎಲ್ಸಿ ರಿಸಲ್ಟ್ 2020 ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಅಥವಾ ಹೋಂ ಪೇಜ್ನಲ್ಲಿರುವ Karnataka ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

ಈ ಪೇಜ್ನಲ್ಲಿ Karnataka SSLC Exam ಎಂಬ ಆಯ್ಕೆ ಇರುತ್ತದೆ.

ಆ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಅಲ್ಲಿ ಕೇಳುವ ನಿಮ್ಮ ಮಾಹಿತಿಯನ್ನು ಪೂರ್ತಿ ಮಾಡಿದರೆ ನಿಮ್ಮ ಫಲಿತಾಂಶ ಸಿಗುತ್ತದೆ.

indiaresults.com ವೆಬ್ಸೈಟ್ನಲ್ಲಿ ನಿಮ್ಮ ಫಲಿತಾಂಶವನ್ನು ನೋಡುವ ವಿಧಾನ ಹೀಗಿದೆ..

indiaresults.com ವೆಬ್ಸೈಟ್ಗೆ ಹೋಗಿ.

ಅಲ್ಲಿರುವ ರಾಜ್ಯಗಳ ಪೈಕಿ ಕರ್ನಾಟಕವನ್ನು ಆಯ್ಕೆ ಮಾಡಿಕೊಳ್ಳಿ. ಹಾಗೇ karnataka.indiaresults.com ಎಂದು ಟೈಪ್ ಮಾಡಿ ಎಂಟರ್ ಬಟನ್ ಒತ್ತಿ.

ಅಲ್ಲಿ ಕರ್ನಾಟಕ ಸೆಕೆಂಡರಿ ಎಜುಕೇಷನ್ ಎಕ್ಸಾಮಿನೇಷನ್ ಬೋರ್ಡ್ ಎಂಬ ಆಯ್ಕೆ ಇರುತ್ತದೆ. ಅದರ ಜೊತೆಗೆ ಕರ್ನಾಟಕ ಎಸ್ಎಸ್ಎಲ್ಸಿ ರಿಸಲ್ಟ್ 2020 ಎಂಬ ಆಯ್ಕೆ ಇರುತ್ತದೆ.

ಆ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಆಗ ಹೊಸ ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ವಿವರಗಳನ್ನು ತುಂಬಿದರೆ ರಿಸಲ್ಟ್ ಸಿಗುತ್ತದೆ.

kseeb.kar.nic.in ಅಥವಾ karresults.nic.in ವೆಬ್ಸೈಟ್ನಲ್ಲಿ ರಿಸಲ್ಟ್ ವೀಕ್ಷಿಸಲು ಹೀಗೆ ಮಾಡಿ.

ವೆಬ್ಸೈಟ್ ಓಪನ್ ಮಾಡಿ ನಂತರ ಹೋಂ ಪೇಜ್ನಲ್ಲಿ ಎಸ್ಎಸ್ಎಲ್ಸಿ ರಿಸಲ್ಟ್ ಎಂಬ ಆಯ್ಕೆಯನ್ನು ಒತ್ತಿ.

ನಿಮ್ಮ ಪರೀಕ್ಷೆಯ ರೋಲ್ ನಂಬರ್ ಮತ್ತು ಪೇಜ್ನಲ್ಲಿ ಕೇಳುವ ಮಾಹಿತಿಯನ್ನು ಭರ್ತಿ ಮಾಡಿ.

ಹಾಲ್ ಟಿಕೆಟ್ನ ಮಾಹಿತಿಯನ್ನು ವೆಬ್ಸೈಟ್ನಲ್ಲಿ ವೇರಿಫೈ ಮಾಡಿಕೊಳ್ಳಿ.

ಆಗ ನಿಮ್ಮ ಪರೀಕ್ಷೆ ಫಲಿತಾಂಶ ಸಿಗುತ್ತದೆ.

ನಂತರ ಆ ಫಲಿತಾಂಶವನ್ನು ಪಿಡಿಎಫ್ ಫಾರ್ಮಾಟ್ನಲ್ಲಿಯೇ ಡೌನ್ಲೋಡ್ ಮಾಡಿಕೊಳ್ಳಿ. ಹಾಗೇ, ಒಂದು ಕಾಪಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಿ.

error: Content is protected !! Not allowed copy content from janadhvani.com