janadhvani

Kannada Online News Paper

ಬೆಂಗಳೂರು ಘರ್ಷಣೆ: ಶಾಂತಿ ಕಾಪಾಡಲು SKSSF ಜಿಸಿಸಿ ಮನವಿ

ಶಾಸಕರ ಸಂಬಂಧಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸ. ಅ)ರವರನ್ನು ನಿಂದಿಸಿ ಪೋಸ್ಟ್ ಹಾಕಿದ ಕಾರಣದಿಂದ ಉತ್ತರ ಬೆಂಗಳೂರಿನ ಕೆಲವು ಭಾಗಗಳಲ್ಲಿ ಘರ್ಷಣೆ ನಡೆದಿದೆ.

ಇಸ್ಲಾಂ ಶಾಂತಿಯ ಧರ್ಮ. ಇತರ ಧರ್ಮೀಯರು ಗೌರವಿಸುವ ಹಾಗೂ ಮುಸ್ಲಿಮರು ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸುವ ಪ್ರವಾದಿ (ಸ. ಅ) ರವರ ನಿಂದನೆ ನಾವು ಸಹಿಸುವುದಿಲ್ಲ. ನಮ್ಮ ಆಕ್ರೋಶ ಧಾರ್ಮಿಕ ಭಾವನೆ ಕೆರಳಿಸುವವರ ವಿರುದ್ಧ ಆಗಿರಬೇಕೇ ಹೊರತು,ಕಾನೂನು ಪಾಲಕರ ಹಾಗೂ ಸಾರ್ವಜನಿಕರ ಆಸ್ತಿಪಾಸ್ತಿ ನಷ್ಟ, ಕಾನೂನು ಕೈಗೆತ್ತಿಕೊಂಡು ಶಾಂತಿ ಕದಡುವ ಪ್ರಯತ್ನಗಳು ಆಗಬಾರದು. ಇಂತಹ ಸಂದರ್ಭದಲ್ಲಿ ಪ್ರಜ್ಞಾವಂತ ನಾಗರಿಕರಾದ ನಾವು ವಿವೇಕಪೂರ್ಣದಿಂದ ಕಾನೂನು ಬದ್ಧವಾಗಿ ಪ್ರತಿಭಟಿಸಬೇಕು.

ಸಮಾಜದಲ್ಲಿ ಅಶಾಂತಿಯ ವಾತಾವರಣ ನಿರ್ಮಿಸುವ ಸಲುವಾಗಿ ನಿರಂತರವಾಗಿ ಸಾಮಾಜಿಕ ಜಾಲತಾಣಗಳಲ್ಲಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕಿಡಿಗೇಡಿಗಳ ಇಂಥಹ ಕೃತ್ಯಗಳಿಗೆ, ಕಾನೂನು ರೀತಿಯಲ್ಲಿ ಕಠಿಣ ಕ್ರಮ ಕೈ ಗೊಳ್ಳದೇ ಇದ್ದಲ್ಲಿ, ಇಂತಹ ಕೃತ್ಯಗಳು ಮರುಕಳಿಸುವುದರಲ್ಲಿ ಸಂಶಯವಿಲ್ಲ.

ಕಾನೂನಾತ್ಮಕ ರೀತಿಯಲ್ಲಿ ಪ್ರತಿಭಟಿಸಿ, ಯಾವುದೇ ಕಾರಣಕ್ಕೂ ವದಂತಿಗಳಿಗೆ ಕಿವಿಗೊಡದೆ, ಉದ್ವೇಗಕ್ಕೊಳಗಾಗದೆ ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಸಹಕರಿಸಿ, ಶಾಂತಿ ನೆಲೆಸಲು ಸಹಕಾರ ನೀಡಬೇಕು.
ಧಾರ್ಮಿಕ ಭಾವೈಕ್ಯತೆಗೆ ಧಕ್ಕೆ ತಂದು ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡಿದ ಆರೋಪಿಗೆ ಕಾನೂನಿನಡಿಯಲ್ಲಿ ತಕ್ಕ ಶಿಕ್ಷೆ ನೀಡಬೇಕು ಹಾಗೆಯೇ ಸಮಾಜದಲ್ಲಿ ಅಶಾಂತಿಯನ್ನು ಸೃಷ್ಟಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಎಸ್ ಕೆ ಎಸ್ ಎಸ್ ಎಫ್ ಜಿಸಿಸಿ ಕೊಡಗು ಘಟಕ ಆಗ್ರಹಿಸಿದೆ.

error: Content is protected !! Not allowed copy content from janadhvani.com