janadhvani

Kannada Online News Paper

74ನೇ ಸ್ವಾತಂತ್ರ್ಯ ದಿನಾಚರಣೆ- ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿಯಿಂದ ಧ್ವಜಾರೋಹಣ

ನವದೆಹಲಿ, ಆ.15: ದೇಶಾದ್ಯಂತ 74ನೇ ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿದೆ. ಸ್ವಾತಂತ್ರ್ಯ ದಿನಾಚರಣೆಯ ಪ್ರಮುಖ ಆಕರ್ಷಣೆ ಆಗಿರುವ ಕೆಂಪು ಕೋಟೆ ಕಾರ್ಯಕ್ರಮವೂ ಕೊರೋನಾ ಹಿನ್ನಲೆಯಲ್ಲಿ ಈ‌ ಸರಳವಾಗಿ ನಡೆಯುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ರಾಜ್ಘಾಟ್ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿಯ ಸಮಾಧಿಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದ ಬಳಿಕ ಕೆಂಪುಕೋಟೆಗೆ ಆಗಮಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಧಾನಿ ಮೋದಿಯವರನ್ನು ಬರಮಾಡಿಕೊಂಡರು.

ಕೆಂಪುಕೋಟೆಗೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ಗಾರ್ಡ್ ಆಫ್ ಹಾನರ್ ಗೌರವ ಸಲ್ಲಿಸಲಾಯಿತು. ಲೆಫ್ಟಿನೆಂಟ್ ಕೊಲೋನೆಲ್ ಗೌರವ್ ಎಸ್ ಯೆವಾಲ್ಕರ್ ಅವರ ನೇತೃತ್ವದಲ್ಲಿ ಪ್ರಧಾನಿ ಮೋದಿಗೆ ಗೌರವ ಸಮರ್ಪಣೆ ಮಾಡಿದರು.

ಈ‌ ಬಾರಿಯ ಕೆಂಪುಕೋಟೆ ಕಾರ್ಯಕ್ರಮಕ್ಕೆ ಕೆಲವೇ ಕೆಲವು ಗಣ್ಯರಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗಿದೆ. ಕೊರೋನಾ ಕಾರಣಕ್ಕೆ ಸಾರ್ವಜನಿಕರಿಗೆ ಈ ಬಾರಿ ಪ್ರವೇಶವನ್ನು ನಿರಾಕರಿಸಲಾಗಿದೆ. ಕೆಂಪು ಕೋಟೆ ಕಾರ್ಯಕ್ರಮದ ವೇಳೆ ನಡೆಯುವ ಧ್ವಜಾರೋಹಣ ಮತ್ತು ಪ್ರಧಾನ ಮಂತ್ರಿ ಭಾಷಣ ಪ್ರಮುಖ ಆಕರ್ಷಣೆ ಆಗಿದೆ.

ಪ್ರಧಾನಿ ಮೋದಿ 74ನೇ ಸ್ವಾತಂತ್ರ್ಯ ದಿನಾಚರಣೆಯ ದಿನ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.