ನವದೆಹಲಿ, ಆ.15: ದೇಶಾದ್ಯಂತ 74ನೇ ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿದೆ. ಸ್ವಾತಂತ್ರ್ಯ ದಿನಾಚರಣೆಯ ಪ್ರಮುಖ ಆಕರ್ಷಣೆ ಆಗಿರುವ ಕೆಂಪು ಕೋಟೆ ಕಾರ್ಯಕ್ರಮವೂ ಕೊರೋನಾ ಹಿನ್ನಲೆಯಲ್ಲಿ ಈ ಸರಳವಾಗಿ ನಡೆಯುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ರಾಜ್ಘಾಟ್ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿಯ ಸಮಾಧಿಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದ ಬಳಿಕ ಕೆಂಪುಕೋಟೆಗೆ ಆಗಮಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಧಾನಿ ಮೋದಿಯವರನ್ನು ಬರಮಾಡಿಕೊಂಡರು.
ಕೆಂಪುಕೋಟೆಗೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ಗಾರ್ಡ್ ಆಫ್ ಹಾನರ್ ಗೌರವ ಸಲ್ಲಿಸಲಾಯಿತು. ಲೆಫ್ಟಿನೆಂಟ್ ಕೊಲೋನೆಲ್ ಗೌರವ್ ಎಸ್ ಯೆವಾಲ್ಕರ್ ಅವರ ನೇತೃತ್ವದಲ್ಲಿ ಪ್ರಧಾನಿ ಮೋದಿಗೆ ಗೌರವ ಸಮರ್ಪಣೆ ಮಾಡಿದರು.
ಈ ಬಾರಿಯ ಕೆಂಪುಕೋಟೆ ಕಾರ್ಯಕ್ರಮಕ್ಕೆ ಕೆಲವೇ ಕೆಲವು ಗಣ್ಯರಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗಿದೆ. ಕೊರೋನಾ ಕಾರಣಕ್ಕೆ ಸಾರ್ವಜನಿಕರಿಗೆ ಈ ಬಾರಿ ಪ್ರವೇಶವನ್ನು ನಿರಾಕರಿಸಲಾಗಿದೆ. ಕೆಂಪು ಕೋಟೆ ಕಾರ್ಯಕ್ರಮದ ವೇಳೆ ನಡೆಯುವ ಧ್ವಜಾರೋಹಣ ಮತ್ತು ಪ್ರಧಾನ ಮಂತ್ರಿ ಭಾಷಣ ಪ್ರಮುಖ ಆಕರ್ಷಣೆ ಆಗಿದೆ.
ಪ್ರಧಾನಿ ಮೋದಿ 74ನೇ ಸ್ವಾತಂತ್ರ್ಯ ದಿನಾಚರಣೆಯ ದಿನ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ