ದೇರಳಕಟ್ಟೆ (ಆ 19): ಇತ್ತೀಚೆಗೆ ಅನಾರೋಗ್ಯದ ಕಾರಣ ನಿಧನರಾದ ಖಾಸಗಿ ಬಸ್ ನಿರ್ವಾಹಕ ಮನೋಜ್ ಕುತ್ತಾರ್ ಅವರ ಮನೆಗೆ ಭೇಟಿ ನೀಡಿದ ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘ, ಪೂರ್ವ ವಲಯ, ದೇರಳಕಟ್ಟೆ ಇದರ ನಿಯೋಗ ಮೃತರ ಪತ್ನಿ ಮತ್ತು ಕುಟುಂಬದವರಿಗೆ ಸಾಂತ್ವಾನ ಹೇಳಿ ಆರ್ಥಿಕ ನೆರವನ್ನು ನೀಡಿತು.
ಈ ಸಂದರ್ಭ ಮಾತನಾಡಿದ ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘದ ಗೌರವಾಧ್ಯಕ್ಷ ಮುನೀರ್ ಕಾಟಿಪಳ್ಳ ಲಾಕ್ಡೌನ್ ಅವಧಿಯಲ್ಲಿ ಜಿಲ್ಲೆಯ ಬಸ್ಸು ನೌಕರರು ಎದುರಿಸಿದ ಆರ್ಥಿಕ ಮತ್ತು ಉದ್ಯೋಗದ ಸಮಸ್ಯೆಗಳ ಸಮಯದಲ್ಲಿ ಬಸ್ಸು ನೌಕರರು ಸಂಘಟಿತರಾಗಬೇಕೆಂಬ ಉದ್ದೇಶದಿಂದ ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘವನ್ನು ಸ್ಥಾಪಿಸಲಾಯಿತು.
ಸಂಘವು ಬಸ್ಸು ನೌಕರರ ಸಮಸ್ಯೆಗಳಿಗೆ ಸ್ಪಂದಿಸಲಿದ್ದು ಸಂಘದ ವತಿಯಿಂದ ಇತ್ತೀಚೆಗೆ ಅನಾರೋಗ್ಯದ ಕಾರಣ ನಿಧನರಾದ ಖಾಸಗಿ ಬಸ್ ನಿರ್ವಾಹಕ ಮನೋಜ್ ಕುತ್ತಾರ್ರವರಿಗೆ ಆರ್ಥಿಕ ನೆರವನ್ನು ನೀಡಲಾಗಿದ್ದು ಸಂಘವು ಮುಂದಿನ ದಿನಗಳಲ್ಲೂ ಮನೋಜ್ ಕುಟುಂಬದ ಜೊತೆ ನಿಲ್ಲಲಿದೆ ಎಂದು ಹೇಳಿದರು.

ನಿಯೋಗದಲ್ಲಿ ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘದ ಅಧ್ಯಕ್ಷ ಅಲ್ತಾಫ್ ಮುಡಿಪು,ಕಾರ್ಯದರ್ಶಿ ಜಗದೀಶ್, ಉಪಾಧ್ಯಕ್ಷ ಬಾಜಿಕ್, ದಿವಾಕರ್, ನಝೀರ್ ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಅಧ್ಯಕ್ಷ ಅಶ್ರಫ್ ಕೆ.ಸಿ ರೋಡ್, ದೇರಳಕಟ್ಟೆ ಘಟಕದ ಅಧ್ಯಕ್ಷ ನವಾಜ್ ಉರುಮನೆ, ಜಿಲ್ಲಾ ಮುಖಂಡ ರಫೀಕ್ ಹರೇಕಳ, ಕಾರ್ಮಿಕ ಮುಂದಾಳು ಇಬ್ರಾಹಿಂ ಮದಕ, ರಾಹುಲ್ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್