ದುಬೈ, ಆ.19: ಭಾರತಕ್ಕೆ ಫ್ಲೈದುಬೈ ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಇನ್ನು ಮುಂದೆ ಕೋವಿಡ್ ಟೆಸ್ಟ್ ಅಗತ್ಯವಿಲ್ಲ. ವಿಮಾನ ನಿಲ್ದಾಣದಲ್ಲಿ ನಡೆಸುತ್ತಿದ್ದ ರಾಪಿಡ್ ಪರೀಕ್ಷೆಯನ್ನು ಕೈಬಿಡಲಾಗಿದೆ. ಆದರೆ, ಅಬುಧಾಬಿ ಮತ್ತು ಶಾರ್ಜಾದಿಂದ ಪ್ರಯಾಣಿಸಲು ನಾಳೆಯಿಂದ ಪಿಸಿಆರ್ ಪರೀಕ್ಷೆ ಕಡ್ಡಾಯವಾಗಿದೆ.
ತೊಂದರೆಗೀಡಾದ ವಲಸಿಗರನ್ನು ವಾಪಸ್ ಕಳುಹಿಸಲು ಪ್ರಾರಂಭಿಸಿದಾಗಿನಿಂದ ದುಬೈ ವಿಮಾನ ನಿಲ್ದಾಣದಲ್ಲಿ ತ್ವರಿತ ತಪಾಸಣೆ ಕಡ್ಡಾಯವಾಗಿತ್ತು.ಈ ಟೆಸ್ಟ್ ನ್ನು ನಿನ್ನೆ ವಿಮಾನ ನಿಲ್ದಾಣದಿಂದ ದುಬೈ ಶಬಾಬ್ ಅಲ್ ಅಹ್ಲಿ ಫುಟ್ಬಾಲ್ ಕ್ಲಬ್‌ಗೆ ವರ್ಗಾಯಿಸಲಾಯಿತು.ಇಲ್ಲಿ ಭಾರೀ ಜನಸಂದಣಿ ಉಂಟಾದ ಹಿನ್ನೆಲೆಯಲ್ಲಿ ಫ್ಲೈ ದುಬೈ ಟೆಸ್ಟ್ ಅಗತ್ಯವಿಲ್ಲ ಎಂಬ ಘೋಷಣೆ ಮಾಡಿದೆ.
ಫ್ಲೈದುಬೈನಲ್ಲಿ ಟಿಕೆಟ್ ಖರೀದಿಸುವವರು ಯಾವುದೇ ಕೋವಿಡ್ ಚೆಕ್ ಇಲ್ಲದೆ ಮಾಸ್ಕ್ ಧರಿಸಿ ಪ್ರಯಾಣಿಸಬಹುದು ಎಂದು ಪ್ರವಾಸೋದ್ಯಮದಲ್ಲಿರುವವರು ಹೇಳುತ್ತಾರೆ.
ಆದರೆ, ದುಬೈನಿಂದ ಕಾರ್ಯನಿರ್ವಹಿಸುತ್ತಿರುವ ಇತರ ವಿಮಾನಯಾನ ಸಂಸ್ಥೆಗಳು ಅಂತಹ ಸೂಚನೆ ನೀಡಿಲ್ಲ. ಇದಲ್ಲದೆ, ಅಬುಧಾಬಿ ಮತ್ತು ಶಾರ್ಜಾ ವಿಮಾನ ನಿಲ್ದಾಣಗಳಿಂದ ನಿರ್ಗಮಿಸಲು 96 ಗಂಟೆಗಳಲ್ಲಿ ನಡೆಸಲಾದ ಕೋವಿಡ್ ಪರೀಕ್ಷೆಯ ಫಲಿತಾಂಶಗಳು ನಾಳೆಯಿಂದ ಕಡ್ಡಾಯವಾಗಲಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಹ ನಿನ್ನೆ ಈ ಕುರಿತು ಪ್ರಯಾಣಿಕರಿಗೆ ಮಾಹಿತಿ ನೀಡಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್‌ಪ್ರೆಸ್ ಘೋಷಣೆ