ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ, ಮಹಾ ಕ್ರೂರಿ ಕೊರೊನಾ ಮತ್ತು ಲಾಕ್ಡೌನ್ ಕಾರಣಗಳಿಂದ ಜನ ಸಾಮಾನ್ಯರು ಎಷ್ಟೇ ಕಷ್ಟದಲ್ಲಿದ್ದರೂ ಇದ್ಯಾವುದನ್ನೂ ಪರಿಗಣಿಸದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೊಲ್ ಬೆಲೆಯನ್ನು ಏರಿಸುತ್ತಲೇ ಇದೆ.
ನವದೆಹಲಿ): ಜೂನ್ ಮತ್ತು ಜುಲೈ ತಿಂಗಳಲ್ಲಿ ನಿರಂತರವಾಗಿ ಇಂಧನ ಬೆಲೆ ಏರಿಸಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗ ಮತ್ತೆ ದರ ಏರಿಕೆಯನ್ನು ಮುಂದುವರೆಸಿದೆ. ಕಳೆದ ಎಂಟು ದಿನಗಳಲ್ಲಿ ಏಳು ಬಾರಿ ಪೆಟ್ರೋಲ್ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡಿದೆ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ ಆಗಸ್ಟ್ 16ರಂದು 14 ಪೈಸೆ, ಆಗಸ್ಟ್ 17ರಂದು 16 ಪೈಸೆ. ಆಗಸ್ಟ್ 18ರಂದು 17 ಪೈಸೆ, ಆಗಸ್ಟ್ 20ರಂದು ಪ್ರತಿ 10 ಪೈಸೆ ಆಗಸ್ಟ್ 21ರಂದು 19 ಪೈಸೆ, ಆಗಸ್ಟ್ 22ರಂದು 16 ಪೈಸೆ ಆಗಸ್ಟ್ 23ರಂದು ಮತ್ತೆ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 14 ಪೈಸೆಯನ್ನು ಹೆಚ್ಚಿಸಿದೆ. ಇದರಿಂದಾಗಿ ಒಟ್ಟು ಕಳೆದ 8 ದಿನಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 1.06 ರೂಪಾಯಿ ಏರಿಕೆ ಮಾಡಿದಂತಾಗಿದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ, ಮಹಾ ಕ್ರೂರಿ ಕೊರೊನಾ ಮತ್ತು ಲಾಕ್ಡೌನ್ ಕಾರಣಗಳಿಂದ ಜನ ಸಾಮಾನ್ಯರು ಎಷ್ಟೇ ಕಷ್ಟದಲ್ಲಿದ್ದರೂ ಹಾಗೂ ಕಾಂಗ್ರೆಸ್ ನಾಯಕರು ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಿದ್ದರೂ ಇದ್ಯಾವುದನ್ನೂ ಪರಿಗಣಿಸದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೊಲ್ ಬೆಲೆಯನ್ನು ಏರಿಸುತ್ತಲೇ ಇದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸುವುದು, ಹಾಗೆಯೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆಯಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಇಳಿಸುವುದು ಸಾಮಾನ್ಯವಾದ ಸಂಗತಿ. ಬಹಳ ಹಿಂದಿನಿಂದಲೂ ಇದು ನಡೆದುಕೊಂಡ ಬಂದಿರುವ ರೀತಿ. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಸತ್ಸಂಪ್ರದಾಯವನ್ನು ಮರೆತಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಆಗುತ್ತಲೇ ಇದೆ.
ಜೂನ್ ತಿಂಗಳಲ್ಲಿ ಬರೊಬ್ಬರಿ 23 ದಿನ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಲಾಗಿತ್ತು. ನಂತರ ಜುಲೈ 7ರಂದು ಪ್ರತಿ ಲೀಟರ್ ಡೀಸೆಲ್ ಗೆ 25 ಪೈಸೆ, ಜುಲೈ 12ರಂದು 16 ಪೈಸೆ, ಜುಲೈ 13ರಂದು 11 ಪೈಸೆ, ಜುಲೈ 15ರಂದು 13 ಪೈಸೆ, ಜುಲೈ 17ರಂದು 17 ಪೈಸೆ, ಜುಲೈ 18ರಂದು ಮತ್ತೆ 17 ಪೈಸೆ, ಜುಲೈ 20ರಂದು 12 ಪೈಸೆ ಹಾಗೂ ಜುಲೈ 26ರಂದು 15 ಪೈಸೆ ಹೆಚ್ಚಳ ಮಾಡಿತ್ತು. ಈಗ ಆಗಸ್ಟ್ ನಲ್ಲಿ ಮತ್ತೆ ಇಂಧನ ಬೆಲೆ ಏರಿಸಿ ಜನರ ಜೇಬಿಗೆ ಕೊಳ್ಳಿ ಇಡುತ್ತಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ