ಮಂಗಳ ಗ್ರಾಮೀಣ ಯುವಕ ಸಂಘ(ರಿ) ಕೊಣಾಜೆ, ಖಿದ್ಮತುಲ್ ಇಸ್ಲಾಂ ಅಸೋಸಿಯೇಷನ್ ಕೋಡಿಜಾಲ್ ಹಾಗೂ YFC ಕೊಣಾಜೆ ಇದರ ಜಂಟಿ ಸಹಭಾಗಿತ್ವದಲ್ಲಿ ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಕಾರ್ಡ್ ಉಚಿತ ವಿತರಣಾ ಕಾರ್ಯಕ್ರಮವು ದಿನಾಂಕ 23ರಂದು ಮಂಗಳ ಗ್ರಾಮೀಣ ಯುವಕ ಸಂಘದ ಕಛೇರಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಮಂಗಳೂರು ಶಾಸಕರಾದ ಯು.ಟಿ ಖಾದರ್ ಅವರು ಸಾಂಕೇತಿಕವಾಗಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡನ್ನು ಅಬ್ದುಲ್ ಖಾದರ್ ಅವರಿಗೆ ವಿತರಿಸುವ ಮೂಲಕ ಉದ್ಘಾಟಿಸಿ, ಮಾತನಾಡಿದ ಶಾಸಕರು ಜಂಟಿ ಸಮಿತಿಯ ಕೆಲಸ ಕಾರ್ಯವನ್ನು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಮೂಡ ಮಾಜಿ ಅಧ್ಯಕ್ಷ ಹಾಜಿ ಇಬ್ರಾಹಿಂ ಕೋಡಿಜಾಲ್, ಗ್ರಾಮ ಪಂಚಾಯಿತ್ ಮಾಜಿ ಅಧ್ಯಕ್ಷರಾದ ಅಚ್ಚುತ ಗಟ್ಟಿ, ಶೌಕತ್ ಅಲಿ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಂಗಳ ಗ್ರಾಮೀಣ ಯುವಕ ಸಂಘದ ಮಾಜಿ ಅಧ್ಯಕ್ಷರಾದ ಅಬ್ದುನ್ನಾಸಿರ್ ಕೆ.ಕೆ., ಅಬ್ದುಲ್ ರಹಿಮಾನ್ ಕೆ.ಎಸ್, ಉದ್ಯಮಿ ತಾಜುದ್ದೀನ್ ಕೊಣಾಜೆ, ಖಿದ್ಮತುಲ್ ಇಸ್ಲಾಂ ಅಸೋಸಿಯೇಷನ್ ಅಧ್ಯಕ್ಷ ಅಮೀರ್ ಕೋಡಿಜಾಲ್, YFC ಅಧ್ಯಕ್ಷ ರಿಯಾಝ್, ಸಮಾಜ ಸೇವಕ ಇಕ್ಬಾಲ್ ಕೊಣಾಜೆ, ಶರೀಫ್, ದಯಾನಂದ ಗಟ್ಟಿ , ಅಶ್ರಫ್, ಹಬೀಬ್, ಹಸೈನಾರ್, ಶಮೀಮ್, ಮೂಸ ಇಬ್ರಾಹಿಂ ಮತ್ತಿತರು ಉಪಸ್ಥಿತರಿದ್ದರು.
ಸುಮಾರು 550 ಆಯುಷ್ಮಾನ್ ಕಾರ್ಡ್ ಪಡೆಯಲು ನೋಂದಣಿ ನಡೆದಿದ್ದು ಮುನ್ನೂರಷ್ಟು ಅಭ್ಯರ್ಥಿಗಳ ಅರ್ಜಿಯನ್ನು ಆನ್ಲೈನ್ ನಲ್ಲಿ ಸಲ್ಲಿಸಲಾಗಿದೆ.
ಇಂದು ನೋಂದಣಿ ಮಾಡಿ ಬಾಕಿ ಉಳಿದ ಅಭ್ಯರ್ಥಿಗಳ ಅರ್ಜಿಯನ್ನು ನಾಳೆಯೂ ಸ್ವೀಕರಿಸಲಾಗುವುದು ಹಾಗೂ ನೋಂದಣಿ ಮಾಡಿ ಅರ್ಜಿ ಸಲ್ಲಿಸಿದ ಎಲ್ಲರಿಗೂ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಉಚಿತವಾಗಿ ನೀಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.
ಮಂಗಳ ಗ್ರಾಮೀಣ ಯುವಕ ಸಂಘದ ಅಧ್ಯಕ್ಷ ಅಬ್ದುಲ್ ರಹಿಮಾನ್ ಎ.ಕೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.