ಬೆಳ್ತಂಗಡಿ ಆ 25 : ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರಿಗೆ ಭಾರತ ಸರ್ಕಾರದ ಆರೋಗ್ಯ ಯೋಜನೆಯಾಗಿರುವ ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ನೋಂದಾವಣೆ ಅಭಿಯಾನವು ಮುರ ಗ್ಲೋಬಲ್ ಫೌಂಡೇಶನ್ ಕಛೇರಿಯಲ್ಲಿ ನಡೆಯಿತು.

ಎಸ್ಡಿಪಿಐ ನಾವೂರು ಬ್ರಾಂಚ್ ಅಧ್ಯಕ್ಷ ಬಶೀರ್ ಕಳಸ ಅಧ್ಯಕ್ಷತೆ ವಹಿಸಿದ್ದರು. ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಕಾರ್ಯದರ್ಶಿ ಶ್ರೀ ಆಲ್ಫೋನ್ಸ್ ಫ್ರಾಂಕೋ ಮುಖ್ಯ ಅತಿಥಿಗಳಾಗಿ ಆಗಮಿಸಿ ಶುಭ ಹಾರೈಸಿದರು. ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾಧ್ಯಕ್ಷ ಜನಾಬ್ ಹೈದರ್ ನೀರ್ಸಾಲ್, ಎಸ್ಡಿಪಿಐ ಜಿಲ್ಲಾ ಸಮಿತಿ ಸದಸ್ಯ ಅಕ್ಬರ್ ಬೆಳ್ತಂಗಡಿ, ತಾಲೂಕು ಸಮಿತಿ ಸದಸ್ಯ ಅಶ್ರಫ್ ಕಟ್ಟೆ, ಗ್ಲೋಬಲ್ ಫೌಂಡೇಷನ್ ಅಧ್ಯಕ್ಷ ಅಬ್ದುಲ್ ಖಾದರ್ ನಾವೂರು, ಸ್ನೇಹ ಸ್ವಸಹಾಯ ಸಂಘ ನಾವೂರು ಪ್ರಧಾನ ಕಾರ್ಯದರ್ಶಿ ಸಿನಾನ್ ಮುರ ಮುಂತಾದವರು ಉಪಸ್ಥಿತರಿದ್ದರು.
ಶಿಬಿರದಲ್ಲಿ 320 ಮಂದಿ ಸಾರ್ವಜನಿಕರು ಹೊಸ ಕಾರ್ಡ್ ನೋಂದಾವಣೆ ಮಾಡಿಕೊಂಡರು. ಎಸ್ಡಿಪಿಐ ನಾವೂರು ಮತ್ತು ಗ್ಲೋಬಲ್ ಫೌಂಡೇಶನ್ ಹಮ್ಮಿಕೊಂಡ ಈ ಕಾರ್ಯಕ್ರಮವು ಸಾರ್ವಜನಿಕರಿಂದ ಬಾರೀ ಪ್ರಶಂಸೆಗೆ ಪಾತ್ರವಾಯಿತು















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್