janadhvani

Kannada Online News Paper

ಕೊರೊನಾ ಆರ್ಭಟದ ಮಧ್ಯೆ ಅಕ್ಟೋಬರ್ 1 ರಿಂದ ಪದವಿ ಕಾಲೇಜು ಆರಂಭ

ಬೆಂಗಳೂರು: ಕೊರೊನಾ ಸೋಂಕಿನ ಆರ್ಭಟದ ನಡುವೆಯೇ ಅಕ್ಟೋಬರ್ 1 ರಿಂದ ರಾಜ್ಯದಲ್ಲಿ ಪದವಿ ಕಾಲೇಜು ಆರಂಭವಾಗಲಿದೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಆದರೆ ಈ ಸಂಬಂಧ ಸರ್ಕಾರದಿಂದ ಅಧಿಕೃತ ಸುತ್ತೋಲೆ ಇನ್ನೂ ಹೊರಟಿಲ್ಲ.

ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ಅಕ್ಟೋಬರ್ 1 ರಿಂದ ರಾಜ್ಯದಲ್ಲಿ ಸ್ನಾತಕ, ಸ್ನಾತಕೋತ್ತರ ತರಗತಿಗಳು ಆರಂಭವಾಗಲಿದ್ದು. ಸೆ. 1 ರಿಂದ ಆನ್ ಲೈನ್ ತರಗತಿ ಆರಂಭವಾಗಲಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಮಾಹಿತಿ ರವಾನಿಸಿದೆ ಎನ್ನಲಾಗಿದ್ದು, ಇನ್ನೂ, ಸರ್ಕಾರದ ಅಧಿಕೃತ ಆದೇಶ ಮಾತ್ರ ಬಾಕಿಯಿದೆ. ಆದರೆ ಸದ್ಯಕ್ಕೆ ಶಾಲೆ ಹಾಗೂ ಪಿಯುಸಿ ತರಗತಿಗಳು ತೆರೆಯುವುದಿಲ್ಲ ಎಂದು ಹೇಳಲಾಗುತ್ತಿದೆ.

ಇನ್ನೂ, ಇತ್ತೀಚೆಗಷ್ಟೇ ಅಂತಿಮ ಸೆಮಿಸ್ಟರ್ ಹಾಗೂ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆ ನಡೆಸಬೇಕೆಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಎಲ್ಲಾರಾಜ್ಯಗಳಿಗೂ ನಿರ್ದೇಶನ ನೀಡಿದೆ. ಸೆಪ್ಟೆಂಬರ್ ಒಳಗಾಗಿ ಪರೀಕ್ಷೆಗಳನ್ನು ಮುಗಿಸಬೇಕೆಂದು ಸ್ಪಷ್ಟನೆ ನೀಡಿದೆ. ಹಾಗಾಗಿ ಕೇಂದ್ರ ಸರ್ಕಾರದ ಮಾರ್ಗ ಸೂಚಿಗನುಸಾರವಾಗಿ ಕಾಲೇಜು ತೆರೆಯಲು ನಿರ್ಧರಿಸಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಎಲ್ಲಾ ಸೆಮಿಸ್ಟರ್‌ಗಳಿಗೆ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿದ್ದಕ್ಕಾಗಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು ವಿದ್ಯಾರ್ಥಿ ಸಮುದಾಯ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯರಿಂದ ತೀವ್ರ ಟೀಕೆಗೆ ಗುರಿಯಾಗಿದೆ. ಇದೇ ವೇಳೆ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆಗಳನ್ನು ನಡೆಸಲು ಸರ್ಕಾರ ತನ್ನ ವ್ಯಾಪ್ತಿಗೆ ಬಂದ ಶಿಕ್ಷಣ ಸಂಸ್ಥೆಗಳನ್ನು ಕೇಳಿಕೊಂಡಿತ್ತು. ವಿಶ್ವವಿದ್ಯಾನಿಲಯವು ಕಾನೂನು ಇಲಾಖೆ ಮತ್ತು ಬಾರ್ ನಿರ್ಧರಿಸಿದ ದಿನಾಂಕಗಳನ್ನು ಅನುಸರಿಸುತ್ತಿದೆ ಮತ್ತು ಇದು ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ.

ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ

ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಗೆ ಹಾಜರಾಗುವ ಪುನರಾವರ್ತಿತ ಅಭ್ಯರ್ಥಿಗಳ ಪರೀಕ್ಷಾ ಶುಲ್ಕವನ್ನು ಪಾವತಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ದಿನಾಂಕ 28-08-2020ರವರೆಗೆ ಅವಕಾಶ ನೀಡಿದೆ.

ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಣೆ ಹೊರಡಿಸಿದ್ದು, ಸೆಪ್ಟೆಂಬರ್-2019ರ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಗೆ ಹಾಜರಾಗುವ ಪುನರಾವರ್ತಿತ ಅಭ್ಯರ್ಥಿಗಳ ( CCERR, CCEPR, NSR ಮತ್ತು NSPR) ಪರೀಕ್ಷಾ ಶುಲ್ಕ ಪಾವತಿಸಲು ದಿನಾಂಕವನ್ನು ವಿಸ್ತರಿಸಲು ದೂರವಾಣಿ ಮುಖಾಂತರ, ಜೊತೆಗೆ ಕೆಲವು ವಿದ್ಯಾರ್ಥಿಗಳು, ಪೋಷಕರು ಖುದ್ದಾಗಿ, ಶಾಲಾ ಮುಖ್ಯೋಪಾಧ್ಯಾಯರು ಮಂಡಳಿಗೆ ಮನವಿ ಮಾಡಿದ್ದಾರೆ.

ಈ ಹಿನ್ನಲೆಯಲ್ಲಿ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಗೆ ಹಾಜರಾಗುವ ಪುನರಾವರ್ತಿತ ಅಭ್ಯರ್ಥಿಗಳು ದಿನಾಂಕ 25-08-2020 ರಿಂದ ದಿನಾಂಕ 28-08-2020ರವರೆಗೆ ಪ್ರತಿ ಅಭ್ಯರ್ಥಿಗೆ ರೂ.300ರ ದಂಡ ಶುಲ್ಕದೊಂದಿಗೆ ಪರೀಕ್ಷಾರ್ಥಿಗಳಿಂದ ಪರೀಕ್ಷಾ ಶುಲ್ಕ ಸ್ವೀಕರಿಸಿ, ಎನ್ ಇ ಎಫ್ ಟಿ ಚಲನ್ ಮೂಲಕ ಬ್ಯಾಂಕಿಗೆ ಪಾಲತಿಸಲು ದಿನಾಂಕ 28-08-2020 ಕೊನೆಯ ದಿನಾಂಕವಾಗಿದೆ.

ದಿನಾಂಕ 29-08-2020 ಎನ್ ಇ ಎಫ್ ಟಿ ಚಲನ್ ಮೂಲಕ ಪರೀಕ್ಷಾ ಶುಲ್ಕವನ್ನು ಬ್ಯಾಂಕ್ ಗೆ ಪಾವತಿಸಲು ಬ್ಯಾಂಕ್ ನ ಮೂಲಕ ಚಲನ್ ಪ್ರತಿ ಮತ್ತು ಇತರೆ ದಾಖಲೆಗಳನ್ನು ಮಂಡಳಿಗೆ ತಲುಪಿಸಲು ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿದೆ.

error: Content is protected !! Not allowed copy content from janadhvani.com