ರಿಯಾದ್ | ವಿವಿಧ ಕಾರಣಗಳಿಗಾಗಿ ಸೌದಿ ಅರೇಬಿಯಾದ ಗಡೀಪಾರು ಕೇಂದ್ರದಲ್ಲಿ ಬಂಧನಕ್ಕೊಳಗಾಗಿದ್ದ ಮಲಯಾಳಿಗಳು ಸೇರಿದಂತೆ ಭಾರತೀಯರು ಬಿಡುಗಡೆ ಹೊಂದಿ ಈ ವಾರ ಮನೆ ಸೇರಲಿದ್ದಾರೆ. ಸೌದಿ ಸರ್ಕಾರದ ಕರುಣೆಯಿಂದ ಸುಮಾರು 800 ಭಾರತೀಯರನ್ನು ಬಿಡುಗಡೆ ಮಾಡಲಾಗುತ್ತಿದೆ.
ಕೋವಿಡ್ ವ್ಯಾಪಕಗೊಂಡ ಹಿನ್ನೆಲೆಯಲ್ಲಿ, ಹೇಗಾದರೂ ಮನೆ ಸೇರಬೇಕು ಎಂಬ ಇರಾದೆಯಿಂದ ಹಲವು ಬಾಗಿಲುಗಳನ್ನು ತಟ್ಟಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಸಂಬಂಧಿಕರು ಮತ್ತು ಸ್ನೇಹಿತರು ಈ ವಿಷಯವನ್ನು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ. ಪಿ. ಅಬೂಬಕರ್ ಮುಸ್ಲಿಯಾರ್ ಅವರ ಗಮನಕ್ಕೆ ತಂದ ನಂತರ ಅವರು ಮಧ್ಯಪ್ರವೇಶಿಸಿದರು.
ತ್ವರಿತ ಪರಿಹಾರಕ್ಕಾಗಿ ಸೌದಿ ಅರೇಬಿಯಾದ ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಿ, ಸೌದಿ ಅರೇಬಿಯನ್ ಸರ್ಕಾರದ ಪ್ರತಿನಿಧಿಗಳನ್ನು ಸಹ ಸಂಪರ್ಕಿಸಿದರು.ಇದರ ಫಲವಾಗಿ ಇದೀಗ 800 ಭಾರತೀಯರಿಗೆ ಬಿಡುಗಡೆ ಭಾಗ್ಯ ಲಭಿಸಿದೆ.
ಅವರು ಚೆನ್ನೈ, ವಿಶಾಖಪಟ್ಟಣಂ ಮತ್ತು ಕೊಚ್ಚಿ ವಿಮಾನ ನಿಲ್ದಾಣಗಳಿಗೆ ಆಗಮಿಸಲಿದ್ದಾರೆ. ಭಾರತದಲ್ಲಿ ಕ್ವಾರಂಟೈನ್ ಸೌಲಭ್ಯವನ್ನು ದೃಢೀಕರಿಸಿದ ನಂತರವೇ ಅವರನ್ನು ಸೌದಿಯಿಂದ ವಾಪಸ್ ಕಳುಹಿಸಲಾಗುತ್ತದೆ. ಜೈಲಿನಲ್ಲಿ ಸೌದಿ ಅಧಿಕಾರಿಗಳು ಗೌರವದಿಂದ ವರ್ತಿಸಿದ್ದರು, ಮನೆಗೆ ಮರಳುವುದು ತುಂಬಾ ಸಮಾಧಾನಕರವಾಗಿದೆ ಎಂದು ಬಂಧಿತರು ಹೇಳುತ್ತಾರೆ.
ಈ ಬಗ್ಗೆ ಮಧ್ಯಪ್ರವೇಶಿಸಿದ ವಿಷಯ ಸಂಬಂಧಿಸಿದಂತೆ ಕಾಂತಪುರಂ ಉಸ್ತಾದರು ಕೇಂದ್ರ ವಿದೇಶಾಂಗ ಸಚಿವರಿಗೆ ಪತ್ರ ಬರೆದಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು