ಮಾಸ್ಕೊ: ಕೋವಿಡ್ ವಿರುದ್ಧ ಅಭಿವೃದ್ಧಿಪಡಿಸಲಾಗಿರುವ ಸ್ಪುಟ್ನಿಕ್–ವಿ ಲಸಿಕೆಯನ್ನು ರಷ್ಯಾ ಸರ್ಕಾರವು ಮಂಗಳವಾರ ನಾಗರಿಕರಿಗಾಗಿ ಬಿಡುಗಡೆ ಮಾಡಿದೆ. ಈ ಕುರಿತು ಅಲ್ಲಿನ ಆರೋಗ್ಯ ಸಚಿವಾಲಯದ ಹೇಳಿಕೆ ಉಲ್ಲೇಖಿಸಿ ರಷ್ಯಾದ ಸುದ್ದಿಸಂಸ್ಥೆ ಟಿಎಸ್ಎಸ್ ವರದಿ ಮಾಡಿದೆ.
‘ಮಾಸ್ಕೊದ ಗಮೆಲಿಯಾ ಇನ್ಸ್ಟಿಟ್ಯೂಟ್ ಮತ್ತು ರಷ್ಯಾ ರಕ್ಷಣಾ ಸಚಿವಾಲಯದ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಸ್ಪುಟ್ನಿಕ್–ವಿ ಲಸಿಕೆಯ ಅಗತ್ಯ ಪರೀಕ್ಷೆಗಳನ್ನು ನಡೆಸಲಾಗಿದೆ. ಮೊದಲ ಹಂತದ ಲಸಿಕೆಗಳನ್ನು ನಾಗರಿಕರಿಗಾಗಿ ಬಿಡುಗಡೆ ಮಾಡಲಾಗಿದೆ’ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಶೀಘ್ರದಲ್ಲೇ ಪ್ರಾದೇಶಿಕ ಮಟ್ಟದ ವಿತರಣೆಯನ್ನೂ ಮಾಡಲಾಗುವುದು ಎಂದು ಸಚಿವಾಲಯ ಹೇಳಿದೆ.ಕೆಲವೇ ತಿಂಗಳುಗಳಲ್ಲಿ ನಗರದಲ್ಲಿರುವ ಹೆಚ್ಚಿನ ನಾಗರಿಕರಿಗೆ ಲಸಿಕೆ ಹಾಕಿಸುವ ಭರವಸೆಯಿದೆ ಎಂದು ಭಾನುವಾರವಷ್ಟೇ ಮಾಸ್ಕೊ ಮೇಯರ್ ಸೆರ್ಗೆ ಸೊಬಯಾನಿನ್ ಹೇಳಿದ್ದರು.















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ