ನವದೆಹಲಿ, ಸೆ.9: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 89 ಸಾವಿರದ 706 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, ಒಂದು ಸಾವಿರದ 115 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಇಂದು ಮಾಹಿತಿ ನೀಡಿದೆ.
ದೇಶದಲ್ಲಿ ಪ್ರಸ್ತುತ 8 ಲಕ್ಷದ 97 ಸಾವಿರದ 394 ಸಕ್ರಿಯ ಪ್ರಕರಣಗಳಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 43 ಲಕ್ಷದ 70 ಸಾವಿರದ 129ಕ್ಕೆ ಏರಿಕೆಯಾಗಿದೆ. ಈ ಪೈಕಿ 33 ಲಕ್ಷದ 98 ಸಾವಿರದ 845 ಮಂದಿ ವಿವಿಧ ಆಸ್ಪತ್ರೆಗಳಿಂದ ಗುಣಮುಖರಾಗಿದ್ದಾರೆ. ಒಟ್ಟಾರೆ ಸೋಂಕಿಗೆ ಇದುವರೆಗೆ 73 ಸಾವಿರದ 890 ಮಂದಿ ಸಾವಿಗೀಡಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ದೇಶದಲ್ಲಿ ನಿನ್ನೆ ಒಂದೇ ದಿನ 11 ಲಕ್ಷದ 54 ಸಾವಿರದ 549 ಕೋವಿಡ್ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಇದುವರೆಗೂ ಕೋವಿಡ್ ಮಾದರಿಗಳ ಪರೀಕ್ಷೆ ಸಂಖ್ಯೆ 5 ಕೋಟಿ 18 ಲಕ್ಷ 4 ಸಾವಿರದ 677ಕ್ಕೆ ಏರಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ-ಐಸಿಎಂಆರ್ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ