janadhvani

Kannada Online News Paper

ಬೆಂಗಳೂರು : ಹಿಂದೂ, ಮುಸ್ಲಿಂ ಎಲ್ಲರೂ ಒಳ್ಳೆಯವರಲ್ಲ, ಕೆಟ್ಟವರೂ ಅಲ್ಲ. ಎಲ್ಲಾ ಜಾತಿ ಧರ್ಮಗಳಲ್ಲೂ ಒಳ್ಳೆಯವರು ಇರುತ್ತಾರೆ, ಕೆಟ್ಟವರು ಇರುತ್ತಾರೆ. ದೇವರು ಇದ್ದಾನೆ ಅಂದ್ರೆ ಅಲ್ಲಿ ದೆವ್ವ -ಸೈತಾನ್‍ಗಳು ಇದ್ದೇ ಇರುತ್ತವೆ ಎಂದು ವಸತಿ ಸಚಿವ ವಿ.ಸೋಮಣ್ಣ ಅವರು ಹೇಳಿದ್ದಾರೆ.

ನಗರದ ಗೋವಿಂದ ರಾಜನಗರ ವಿಧಾನಸಭಾ ಕ್ಷೇತ್ರದ ನಾಗರಭಾವಿ ವಾರ್ಡ್ ನಲ್ಲಿ ಈದ್ಗಾ ಮೈದಾನ ಕಂಪೌಂಡ್ ಪೂಜೆ ನೆರವೇರಿಸಿ ಮಾತನಾಡಿದ ಸೋಮಣ್ಣ, ಈ ಕೆಲಸಕ್ಕೂ ಜಾತಿ ಧರ್ಮಕ್ಕೂ ಸಂಬಂಧವಿಲ್ಲ. ಇದು ನನ್ನ ಕರ್ತವ್ಯ. ಒಬ್ಬ ಜನಪ್ರತಿನಿಧಿಯಾಗಿ ನಾನು ನನ್ನ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದೇನೆ. ನಾವು ಭಾರತೀಯರು, ಹಿಂದೂ-ಮುಸ್ಲಿಮರು ಒಂದೇ ಮನೆಯವರು. ನೀವೂ ಅಲ್ಲಾ ಅಂತೀರಾ ನಾವು ಶಿವ ಅಂತೀವಿ, ಎಲ್ಲರಿಗೂ ದೇವರೊಬ್ಬನೇ ಎಂದರು.

ಕೆಲಸ ಮಾಡುವವರಿಗೆ ಅವಕಾಶ ಮಾಡಿಕೊಡಿ. ನಿಮ್ಮಲ್ಲಿರುವ ಬಡವರ ಲೀಸ್ಟ್ ಕೊಡಿ, ಅವರಿಗೆ ಮನೆ ಕೊಟ್ಟಿಕೊಡಲು ಮೂರುವರೆ ಲಕ್ಷ ರೂಪಾಯಿ ದುಡ್ಡು ಕೊಡುತ್ತೇವೆ ಎಂದು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಮುಸ್ಲಿಂ ಮುಖಂಡರು ಉಪಸ್ಥಿತರಿದ್ದರು.

error: Content is protected !!
%d bloggers like this: