janadhvani

Kannada Online News Paper

ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ: 130 ತಾಲೂಕುಗಳನ್ನು ಪ್ರವಾಹಪೀಡಿತವೆಂದು ಘೋಷಣೆ

ಬೆಂಗಳೂರು, ಸೆ.11: ಕರ್ನಾಟಕದಲ್ಲಿ ಬಿಡುವು ಪಡೆದಿದ್ದ ಮಳೆ ಇದೀಗ ಮತ್ತೆ ತನ್ನ ಆರ್ಭಟವನ್ನು ಮುಂದುವರೆಸಿದೆ. ಜುಲೈ ತಿಂಗಳಲ್ಲಿ ಕರ್ನಾಟಕದ ಕೊಡಗು, ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ವಿಜಯಪುರದಲ್ಲಿ ಉಂಟಾದ ಮಳೆಯಿಂದ ಪ್ರವಾಹದ ಆತಂಕ ಎದುರಾಗಿತ್ತು. ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಬಾಗಲಕೋಟೆ, ಬೆಳಗಾವಿಯಲ್ಲಿ ಮನೆಗಳೇ ಕೊಚ್ಚಿಹೋಗಿದ್ದವು. ಕೊಡಗಿನ ಪ್ರವಾಹಕ್ಕೆ ಗುಡ್ಡ ಕುಸಿದು ಒಂದು ಕುಟುಂಬವೇ ಬಲಿಯಾಗಿತ್ತು. ಇದೀಗ ಪ್ರವಾಹಪೀಡಿತ ತಾಲೂಕುಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ್ದು, ಕರ್ನಾಟಕದ 23 ಜಿಲ್ಲೆಗಳ 130 ತಾಲೂಕುಗಳನ್ನು ಪ್ರವಾಹಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ.

ಮಂಡ್ಯ, ದಾವಣಗೆರೆ, ಉತ್ತರ ಕನ್ನಡ, ಚಾಮರಾಜನಗರ, ಮೈಸೂರು, ಬಳ್ಳಾರಿ, ಕೊಪ್ಪಳ, ರಾಯಚೂರು, ಕಲಬುರ್ಗಿ, ಯಾದಗಿರಿ, ಬೆಳಗಾವಿ, ಬೀದರ್, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು ಪ್ರವಾಹಪೀಡಿತ ಜಿಲ್ಲೆಗಳಾಗಿವೆ. ಇಲ್ಲಿನ ಬಹುತೇಕ ತಾಲೂಕುಗಳನ್ನು ಪ್ರವಾಹಪೀಡಿತ ಎಂದು ಗುರುತಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ, ಭದ್ರಾವತಿ, ಸಾಗರ, ತೀರ್ಥಹಳ್ಳಿ, ಸೊರಬ, ಶಿಕಾರಿಪುರ, ಶಿವಮೊಗ್ಗ, ತೀರ್ಥಹಳ್ಳಿ ತಾಲೂಕು, ಚಿಕ್ಕಮಗಳೂರಿನ ಕೊಪ್ಪ, ಚಿಕ್ಕಮಗಳೂರು, ಶೃಂಗೇರಿ, ಮೂಡಿಗೆರೆ, ಎನ್ಆರ್ಪುರ, ತರಿಕೆರೆ, ಕೊಡಗಿನ ಮಡಿಕೇರಿ, ಸೋಮವಾರ ಪೇಟೆ, ವಿರಾಜಪೇಟೆ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಕಡಬ, ಮಂಗಳೂರು, ಮೂಡಬಿದ್ರೆ, ಪುತ್ತೂರು ತಾಲೂಕುಗಳನ್ನು ಪ್ರವಾಹಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ.

ಉಡುಪಿ ಜಿಲ್ಲೆಯ ಬೈಂದೂರು, ಬ್ರಹ್ಮಾವರ, ಹೆಬ್ರಿ, ಕಾಪು, ಕಾರ್ಕಳ, ಕುಂದಾಪುರ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಹೊನ್ನಾವರ, ಕಾರವಾರ, ಕುಮಟಾ, ಶಿರಸಿ, ಅಂಕೋಲ, ಮುಂಡಗೋಡ, ಸಿದ್ಧಾಪುರ, ಸೂಪ, ಯಲ್ಲಾಪುರ ತಾಲೂಕು, ದಾವಣಗೆರೆ ಜಿಲ್ಲೆಯ ನ್ಯಾಮತಿ, ಹೊನ್ನಾಳಿ, ಹರಿಹರ ತಾಲೂಕು, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ, ಹಾಸನದ ಆಲೂರು, ಅರಕಲಗೂಡು, ಬೇಲೂರು, ಹಾಸನ, ಸಕಲೇಶಪುರ ತಾಲೂಕು, ಧಾರವಾಡ ಜಿಲ್ಲೆಯ ಅಳ್ನಾವರ, ಧಾರವಾಡ, ಹುಬ್ಬಳ್ಳಿ, ಹುಬ್ಬಳ್ಳಿನಗರ, ಕಲಘಟಗಿ, ಕದಗೋಳ, ನವಲಗುಂದ ತಾಲೂಕು, ಹಾವೇರಿಯ ಹಾನಗಲ್, ಹಾವೇರಿ, ಹಿರೇಕೆರೂರು, ರಾಣೆಬೆನ್ನೂರು, ರಟ್ಟಿಹಳ್ಳಿ, ಶಿಗ್ಗಾಂವ್ ತಾಲೂಕುಗಳನ್ನು ಪ್ರವಾಹಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ.

ಹಾಗೇ, ಗದಗದ ಮುಂಡರಗಿ, ನರಗುಂದ, ರೋಣ, ಶಿರಹಟ್ಟಿ, ವಿಜಯಪುರದ ಬಬಲೇಶ್ವರ, ಕೋಲ್ಹಾರ, ಮುದ್ದೇಬಿಹಾಳ, ನಿಡಗುಂದಿ, ಕೊಪ್ಪಳದ ಗಂಗಾವತಿ, ಕೊಪ್ಪಳ, ಕಾರಟಗಿ, ಮಂಡ್ಯದ ಕೆ.ಆರ್. ಪೇಟೆ, ಮೈಸೂರಿನ ಹುಣಸೂರು, ಕೆಆರ್ ನಗರ, ಮೈಸೂರು, ಪಿರಿಯಾಪಟ್ಟಣ, ಬಾಗಲಕೋಟೆ, ಬೆಳಗಾವಿ, ಬೀದರ್, ಯಾದಗಿರಿ, ಕಲಬುರ್ಗಿ, ರಾಯಚೂರು, ಬಳ್ಳಾರಿಯ ಬಹುತೇಕ ಎಲ್ಲ ತಾಲೂಕುಗಳನ್ನು ಪ್ರವಾಹಪೀಡಿತ ತಾಲೂಕುಗಳೆಂದು ರಾಜ್ಯ ಸರ್ಕಾರ ಘೋಷಿಸಿದೆ.

ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಮಾರ್ಗಸೂಚಿಗಳ ಪ್ರಕಾರ ಪ್ರವಾಹಪೀಡಿತ ತಾಲೂಕುಗಳೆಂದು ಘೋಷಿಸಿರುವ ಪ್ರದೇಶಗಳಲ್ಲಿ ಪರಿಹಾರ ಕಾಮಗಾರಿ ಕೈಗೊಳ್ಳಲು ಆಯಾ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ.

error: Content is protected !! Not allowed copy content from janadhvani.com