ಕಡಬ: ಸೆ.11 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಡಬ ತಾಲೂಕು ಸಮಿತಿ ವತಿಯಿಂದ ಮುಂಬರುವ ಗ್ರಾಮ ಪಂಚಾಯತ್ ಚುನಾವಣಾ ಪೂರ್ವ ತಯಾರಿಯ ಬಗ್ಗೆ ಸಭೆ ನಡೆಸಲಾಯಿತು.

ಮುಂದಿನ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿ ಎಲ್ಲಾ ಬ್ರಾಂಚ್ ಮತ್ತು ವಾರ್ಡ್ಗಳಲ್ಲಿ ಎಸ್ಡಿಪಿಐ ಪಕ್ಷವು ಕಾರ್ಯತಂತ್ರಗಳನ್ನು ರೂಪಿಸುವ ಬಗ್ಗೆ ಸುಧೀರ್ಘ ಚರ್ಚೆ ನಡೆಸಿ ನೆಲ್ಯಾಡಿ,ಕಡಬ,ಆತೂರು ಸೇರಿದಂತೆ ಸುಮಾರು ಹತ್ತು ಪಂಚಾಯತ್ ಗಳಲ್ಲಿ ಚುನಾವಣೆಯಲ್ಲಿ ಸ್ಪರ್ದಿಸುವುದು ಎಂದು ತೀರ್ಮಾನಿಸಲಾಯಿತು. ಕಳೆದ ಸಭೆಯ ನಂತರದ ಎಲ್ಲಾ ಬ್ರಾಂಚ್ ಮಟ್ಟದ ಕಾರ್ಯರೂಪದ ಬಗ್ಗೆ ವರದಿ ಪಡೆದು, ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯತಂತ್ರದ ರೂಪುರೇಷೆಗಳನ್ನು ಸಿದ್ಧಪಡಿಸಲಾಯಿತು.
ಈ ಸಂದರ್ಭದಲ್ಲಿ ಎಸ್ ಡಿ ಪಿ ಐ ಕಡಬ ತಾಲೂಕು ಸಮಿತಿ ಅಧ್ಯಕ್ಷರಾದ ರಮ್ಲಾ ಸನ್ ರೈಸ್, ಕಡಬ ತಾಲೂಕು ಎಸ್ ಡಿ ಪಿ ಐ ಚುನಾವಣೆ ಉಸ್ತುವಾರಿ ಹಮೀದ್ ಮೆಜೆಸ್ಟಿಕ್, ಕಡಬ ತಾಲೂಕು ಸಮಿತಿ ಕಾರ್ಯದರ್ಶಿ ರಫೀಕ್ ಬೈಲು, ಕಡಬ ತಾಲೂಕು ಸಮಿತಿ ಸದಸ್ಯರು ಹಾಗೂ ನೆಲ್ಯಾಡಿ, ಕಡಬ, ಕೌಕ್ರಾಡಿ, ಆತೂರು ಎಲ್ಲಾ ಬ್ರಾಂಚಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್
ಸರಕಾರದ ಆದೇಶ, ತುಳುನಾಡಿನ ಜನತೆಯ ಒಗ್ಗಟ್ಟಿನ ಹೋರಾಟದ ಫಲ- ಮುನೀರ್ ಕಾಟಿಪಳ್ಳ
ಮುಸ್ಲಿಮ್ ವರ್ತಕರ ಮೇಲೆ ಹಲ್ಲೆ: ಮುಸ್ಲಿಮ್ ಮುಖಂಡರ ಭೇಟಿ, ಗಂಭೀರ ಪರಿಗಣನೆ- ಕೆ.ಅಶ್ರಫ್