ಕುಂಬ್ರ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ ಎಸ್ಸೆಸ್ಸಫ್ ಕುಂಬ್ರ ಸೆಕ್ಟರ್ ವತಿಯಿಂದ ಸೆಕ್ಟರ್ ವ್ಯಾಪ್ತಿಯ 11 ಶಾಖೆಗಳ ನಾಯಕರಿಗಾಗಿ Inspiration 2k20 ಕಾರ್ಯಾಗಾರವನ್ನು ಅಮ್ಚಿನಡ್ಕ ಬದಿಯಡ್ಕ ಮಸೀದಿ ವಠಾರದಲ್ಲಿ ನಡೆಸಲಾಯಿತು..

ಎಸ್ಸೆಸ್ಸಫ್ ಕುಂಬ್ರ ಸೆಕ್ಟರ್ ಅಧ್ಯಕ್ಷ ಶಮೀರ್ ಸಖಾಫಿ ರೆಂಜಲಾಡಿ ಅಧ್ಯಕ್ಷತೆಯನ್ನು ವಹಿಸಿದ್ದರು. ಎಸ್ಸೆಸ್ಸಫ್ ಪುತ್ತೂರು ಡಿವಿಝನ್ ಅಧ್ಯಕ್ಷರಾದ ಝುಬೈರ್ ಸಖಾಫಿ ಗಟ್ಟಮನೆ ಉದ್ಘಾಟಿಸಿದರು.
ಎಸ್ ವೈ ಎಸ್ ರಾಜ್ಯ ನಾಯಕರಾದ ಜಿ.ಎಂ ಮುಹಮ್ಮದ್ ಕಾಮಿಲ್ ಸಖಾಫಿ ತರಗತಿ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ 2019-20 ನೇ ಸಾಲಿನ ಎಸ್ಸೆಸ್ಸಲ್ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕವನ್ನು ಪಡೆದ ಅಮ್ಚಿನಡ್ಕ ಶಾಖೆಯ ನಾಲ್ವರು ಪ್ರತಭೆಗಳನ್ನು ಶಾಖೆಯ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸಫ್ ಈಸ್ಟ್ ಝೋನ್ ಅಧ್ಯಕ್ಷ ಅಯ್ಯೂಬ್ ಮಹ್ಳರಿ ಕಾವಲಕಟ್ಟೆ, ಬದಿಯಡ್ಕ ಮಸ್ಜಿದ್ ಅಧ್ಯಕ್ಷರಾದ ಹಸೈನಾರ್, ಪಿ.ಎ. ಇಂಜಿನಿಯರಿಂಗ್ ಕಾಲೇಜು ಪ್ರೊಪೆಸರ್ ಅಬ್ದುಲ್ ಕಾದರ್, ಅಮ್ಚಿನಡ್ಕ ಬ್ರಾಂಚ್ ಎಸ್ ವೈ ಎಸ್ ನಾಯಕರಾದ ಮೂಸ ಬದಿಯಡ್ಕ, ಎಸ್ಎಸ್ಎಫ್ ಈಸ್ಟ್ ಝೋನ್ ಪ್ರಧಾನ ಕಾರ್ಯದರ್ಶಿ ಶಫೀಕ್ ಮಾಸ್ಟರ್ ತಿಂಗಳಾಡಿ, ಡಿವಿಝನ್ ಪ್ರಧಾನ ಕಾರ್ಯದರ್ಶಿ ಇಮ್ರಾನ್ ರೆಂಜಲಾಡಿ, ಡಿವಿಷನ್ ಬ್ಲಡ್ ಉಸ್ತುವಾರಿ ಹಾರಿಸ್ ಅಡ್ಕ
ಹಾಗೂ ಸೆಕ್ಟರ್ ವ್ಯಾಪ್ತಿಯ 11 ಶಾಖೆಗಳ 100ಕ್ಕಿಂತಲೂ ಮಿಕ್ಕ ನಾಯಕರು ಉಪಸ್ಥಿತರಿದ್ದರು.
ಹಾಫಿಝ್ ರಂಶೀದ್ ಸಖಾಫಿ ಕಾರ್ಯಕ್ರಮವನ್ನು ನಿರೂಪಿಸಿದರು. ಅಮ್ಚಿನಡ್ಕ ಶಾಖೆಯ ಅಧ್ಯಕ್ಷರಾದ ಹನೀಫ್ ಮಿಸ್ಬಾಹಿ ಸ್ವಾಗತಿಸಿ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಕಟ್ಟತ್ತಾರು ಕೃತಜ್ಞತೆ ಸಲ್ಲಿಸಿದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ