janadhvani

Kannada Online News Paper

ಲಕ್ನೋ: ದೇಶದ ಪ್ರಜೆಗಳ ಹಿತ ದೃಷ್ಟಿಯಿಂದ ಶಾಲಾ-ಕಾಲೇಜುಗಳ ಶುಲ್ಕವನ್ನು ಮನ್ನಾ ಮಾಡುವಂತೆ ಬಹುಜನಾ ಸಮಾಜ ಪಕ್ಷದ ನಾಯಕಿ ಮಾಯಾವತಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮಾಯಾವತಿ. ಕೊರೋನಾ ಲಾಕ್ ಡೌನ್ ಹಿನ್ನೆಲೆ ಜನರು ಸಂಕಷ್ಟದಲ್ಲಿದ್ದಾರೆ. ಕೋಟ್ಯಾಂತರ ಮಂದಿ ಕೆಲಸ ಕಳೆದುಕೊಂಡಿದ್ದಾರೆ, ಪೋಷಕರು ತಮ್ಮ ಮಕ್ಕಳ ಫೀಸ್ ಕಟ್ಟಲಾಗುತ್ತಿಲ್ಲ, ಆದ್ದರಿಂದ ಶಾಲಾ-ಕಾಲೇಜು ಶುಲ್ಕ ಮನ್ನಾ ಮಾಡುವಂತೆ ಮನವಿ ಮಾಡಿದ್ದಾರೆ.

ಕೋವಿಡ್ ಸಂಕಷ್ಟದಲ್ಲಿರುವ ದೇಶದ ಜನರ ಹಿತಾಸಕ್ತಿಗೆ ಕೇಂದ್ರ ಸರ್ಕಾರ ಮುಂದಾಗಬೇಕು. ಪೋಷಕರ ಕಷ್ಟಗಳನ್ನು ಅರಿತು ಅವರು ಈಗಾಗಲೇ ನೀಡಿರುವ ಶುಲ್ಕಗಳನ್ನು ವಾಪಸ್ ನೀಡಬೇಕು. ಅಲ್ಲದೇ ಈ ಬಾರಿಯ ಶಾಲಾ ಕಾಲೇಜು ಶುಲ್ಕವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

error: Content is protected !!
%d bloggers like this: