ನವದೆಹಲಿ, ಸೆ 13 : ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು , ಕಳೆದ ರಾತ್ರಿ ಮತ್ತೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆಗಸ್ಟ್ 2 ರಂದು, ಅವರು ಕರೋನ ಸೋಂಕಿಗೆ ಒಳಗಾಗಿದ್ದರು ನಂತರ ಅವರನ್ನು ಗುರುಗ್ರಾಮದ ಮೆಡಂತಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಕರೋನದಿಂದ ಗುಣಮುಖರಾದ ನಂತರ ಕಳೆದ 14 ರಂದು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು.
ಆಯಾಸ ಮತ್ತು ದೇಹದ ನೋವುಗಳ ಹಿನ್ನೆಲೆಯಲ್ಲಿ ಅವರನ್ನು ನಂತರ ಏಮ್ಸ್ ಗೆ ದಾಖಲಿಸಲಾಗಿತ್ತು 13 ದಿನಗಳ ಚಿಕಿತ್ಸೆ ಮತ್ತು ಚೇತರಿಕೆ ನಂತರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಈಗ ಮತ್ತೆ ಉಸಿರಾಟದ ಸಮಸ್ಸೆ ಕಾರಣ ದಾಖಲಾಗಿದ್ದಾರೆ.
ಅಮಿತ್ ಶಾ ಅವರ ಆನಾರೋಗ್ಯ ಸಂಬಂಧ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ಭಾನುವಾರ ಹೇಳಿಕೆ ಬಿಡುಗಡೆ ಮಾಡಿದೆ.
ಅನಾರೋಗ್ಯ ಕಾರಣ ಅಮಿತ್ ಶಾ ಅವರು ಶನಿವಾರ ರಾತ್ರಿ 11 ಗಂಟೆಗೆ ಏಮ್ಸ್ ಗೆ ದಾಖಲಾಗಿದ್ದಾರೆ. ಅವರು ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಉಸಿರಾಟ ನಡೆಸಲು ಸಮಸ್ಯೆ ಎದುರಾದ ತಕ್ಷಣ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅವರ ಆರೋಗ್ಯ ಕುರಿತು ದೇಶಾದ್ಯಂತ ಕಳವಳ ವ್ಯಕ್ತಗೊಂಡಿರುವ ಹಿನ್ನೆಲೆಯಲ್ಲಿ ಏಮ್ಸ್ ಹೇಳಿಕೆ ಬಿಡುಗಡೆ ಮಾಡಿದೆ.
ಸಂಸತ್ತಿನ ಮುಂಗಾರು ಅಧಿವೇಶನ ನಾಳೆಯಿಂದ ಆರಂಭಗೊಳ್ಳುತ್ತಿರುವ ಹಿನ್ನಲೆಯಲ್ಲಿ ಅಮಿತ್ ಶಾ ಅವರು ಸಂಪೂರ್ಣ ಆರೋಗ್ಯ ತಪಾಸಣೆಗೆ ಒಳಗಾಗುತ್ತಿದ್ದಾರೆ ಎಂದು ಏಮ್ಸ್ ವೈದ್ಯರು ತಿಳಿಸಿದ್ದಾರೆ.
ಈ ಸಂಬಂಧ ಏಮ್ಸ್ ನ ಮಾಧ್ಯಮ ಹಾಗೂ ಪ್ರೊಟೊಕಾಲ್ ವಿಭಾಗದ ಮುಖ್ಯಸ್ಥೆ ಡಾ. ಆರ್ತಿ ವಿಜ್ ಹೇಳಿಕೆ ನೀಡಿದ್ದಾರೆ. ಕೊರೊನಾ ಸೋಂಕಿಗೆ ಒಳಗಾಗಿ ಚೇತರಿಸಿಕೊಂಡು ಮೆದಾಂತ ಆಸ್ಪತ್ರೆಯಿಂದ ಬಿಡುಗಡೆಗೊಂಡ ನಂತರ ಆಯಾಸ, ಮೈ ನೋವು ಹಿನ್ನೆಲೆಯಲ್ಲಿ ಕಳೆದ ಆಗಸ್ಟ್ 18ರಂದು ಏಮ್ಸ್ ಗೆ ದಾಖಲಾಗಿದ್ದರು. 13 ದಿನಗಳ ಚಿಕಿತ್ಸೆಯ ನಂತರ ಆಗಸ್ಟ್ 30 ರಂದು ಅವರನ್ನು ಏಮ್ಸ್ ನಿಂದ ಬಿಡುಗಡೆ ಮಾಡಲಾಗಿತ್ತು.
ಎರಡು ವಾರಗಳ ನಂತರ ಮತ್ತೆ ಪರೀಕ್ಷೆಗಳಿಗೆ ಅಸ್ಪತ್ರೆಗೆ ಬರುವಂತೆ ಸೂಚನೆ ನೀಡಲಾಗಿತ್ತು. ಅದರಂತೆ ಅಮಿತ್ ಷಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದೆರಡು ದಿನಗಳಲ್ಲಿ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ಆರ್ತಿ ವಿಜ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.