janadhvani

Kannada Online News Paper

ಸುಳ್ಯ,ಸೆ.13: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನ ಸಭಾ ಕ್ಷೇತ್ರಕ್ಕೆ ಒಳಪಟ್ಟ ಕಲ್ಲುಗುಂಡಿ,ಸಂಪಾಜೆ,ಗೂನಡ್ಕ ವ್ಯಾಪ್ತಿಗೆ ಸಂಬಂಧಪಟ್ಟ ನೂತನ ವಲಯ ಸಮಿತಿ ರಚನೆ ಮತ್ತು ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮವು ಕಲ್ಲುಗುಂಡಿಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಪಿ ಐ ಸುಳ್ಯ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಬ್ದುಲ್ ಕಲಾಂ ಸುಳ್ಯ ವಹಿಸಿದರು.ಕಾರ್ಯಕ್ರಮವನ್ನು ಉದ್ದೇಶಿಸಿ ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಮಾತನಾಡಿ ಪ್ರಸಕ್ತ ಸನ್ನಿವೇಶ, ರಾಜಕೀಯದ ಅನಿವಾರ್ಯತೆ ಮತ್ತು ಪಕ್ಷದ ತತ್ವ ಸಿದ್ಧಾಂತವನ್ನು ಸವಿಸ್ತಾರವಾಗಿ ವಿವರಿಸಿದರು.
ಸುಮಾರು 30 ರಷ್ಟು ಹೊಸ ಕಾರ್ಯಕರ್ತರು ಪಕ್ಷದ ಸಿದ್ಧಾಂತವನ್ನು ಒಪ್ಪಿ ಸದಸ್ಯತ್ವವನ್ನು ಸ್ವೀಕರಿಸಿದರು.
ವೇದಿಕೆಯಲ್ಲಿ ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿ ಮುಸ್ತಫಾ ಎಂ.ಕೆ,ಅಬ್ದುಲ್ಲಾ ಅಡ್ಕಾರ್ ಮತ್ತಿತರರು ಉಪಸ್ಥಿತರಿದ್ದರು.

ಎಸ್‌ಡಿಪಿಐ ಸಂಪಾಜೆ ವಲಯ ಉಸ್ತುವಾರಿ ಆಶ್ರಫ್ ಟರ್ಲಿ ಸ್ವಾಗತಿಸಿ, ಮರ್ಜೂಕ್ ಕಡೆಪಾಲ ವಂದಿಸಿದರು ಫಾರೂಕ್ ಕಾನಕ್ಕೋಡ್ ಕಾರ್ಯಕ್ರಮ ನಿರೂಪಿಸಿದರು.

error: Content is protected !!
%d bloggers like this: