janadhvani

Kannada Online News Paper

ಸೆ.18: ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿಯಿಂದ ‘RESURGENCE-20’

ಕರ್ನಾಟಕ ಕಲ್ಚರಲ್ ಫೌಂಡೇಶನ್ ಇದರ ಅಂತಾರಾಷ್ಟ್ರೀಯ ಸಮಿತಿ ವತಿಯಿಂದ “Resurgence-20″ ಕಾರ್ಯಕ್ರಮವು ಸೆ.18 ರಂದು Zoom App ನಲ್ಲಿ ನಡೆಯಲಿದೆ.

ಭಾರತೀಯ ಕಾಲಮಾನ ರಾತ್ರಿ 9.30ಕ್ಕೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕೇರಳ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಬದ್ರುಸ್ಸಾದಾತ್ ಅಸ್ಸಯ್ಯಿದ್ ಇಬ್ರಾಹೀಮುಲ್ ಖಲೀಲ್ ಅಲ್-ಬುಖಾರಿ ತಂಙಳ್ ರವರು ಉಪನ್ಯಾಸ ನೀಡಲಿದ್ದಾರೆ.

ಕೊಡಗು ಜಿಲ್ಲಾ ಸಹಾಯಕ ಖಾಝಿಯವರಾದ ಬಹು| ಕೆ.ಎ.ಮಹ್ಮೂದ್ ಮುಸ್ಲಿಯಾರ್ ಎಡಪ್ಪಾಲ ಇವರ ದುಆದೊಂದಿಗೆ ಆರಂಭಗೊಳ್ಳಲಿರುವ ಕಾರ್ಯಕ್ರಮವನ್ನು ಕರ್ನಾಟಕ ಜಮ್ಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಬಹು| ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉಸ್ತಾದರು ಉದ್ಘಾಟಿಸಲಿದ್ದಾರೆ.

ಕೋವಿಡ್ ಕಾಲದಲ್ಲಿ ಹಲವರ ಕೆಲಸಗಳು ನಷ್ಟವಾಗಿದ್ದು, ಇನ್ನು‌ ಕೆಲವರು ಆರ್ಥಿಕವಾಗಿ ಬಹುದೊಡ್ಡ ನಷ್ಟದಲ್ಲಿದ್ದಾರೆ. ಈ ಸಂದಿಗ್ಧ ಪರಿಸ್ಥಿತಿಯನ್ನು ನಿಭಾಯಿಸಲು ಉಲಮಾ ನಾಯಕರ ಸಲಹೆಗಳು ಬಹಳಷ್ಟು ಉಪಕಾರಿಯಾಗಲಿದೆ.

ಧಾರ್ಮಿಕ ನೈತಿಕತೆ ಹಾಗೂ ಆಧ್ಯಾತ್ಮಿಕ ಮರೀಚಿಕೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿರುವ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಸ್ವಸ್ಥ ಸಮಾಜ ನಿರ್ಮಾಣದ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಆದ್ದರಿಂದ ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಕಾರ್ಯಕ್ರಮದ ಕನ್ವೀನರ್ ರಹೀಮ್ ಸಅದಿ ಖತರ್ ಹಾಗೂ ಇಕ್ಬಾಲ್ ಬರಕ ಒಮಾನ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

error: Content is protected !! Not allowed copy content from janadhvani.com