ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ (SSF) ಇದರ ಸೂರಿಕುಮೇರು ಶಾಖೆಯ ಮಫಾಝ ಕ್ಯಾಂಪ್ ಸೆಪ್ಟೆಂಬರ್ 17 ಗುರುವಾರ ಯೂಸುಫ್ ಹಾಜಿಯವರ ದಾರುಲ್ ಬರಕದಲ್ಲಿ ನಡೆಯಿತು.ಎಸ್ಸೆಸ್ಸೆಫ್ ಸೂರಿಕುಮೇರು ಶಾಖೆಯ ಅಧ್ಯಕ್ಷ ಮುಬಶ್ಶಿರ್ ಮುಸ್ಲಿಯಾರ್ ರವರ ಅಧ್ಯಕ್ಷತೆಯಲ್ಲಿ ಪ್ರಧಾನ ಕಾರ್ಯದರ್ಶಿ ನೌಶಾದ್ ಉಮ್ಮರ್ ಸ್ವಾಗತಿಸಿದರು.
ಸಯ್ಯಿದ್ ಸಾಬಿತ್ ಸಖಾಫಿ ಅಲ್ ಮುಈನೀ ದುಆ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು,ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಅಧ್ಯಕ್ಷ ಮಿತ್ತೂರು ಕೆಜಿಎನ್ ವಿದ್ಯಾಲಯದ ಅಧ್ಯಾಪಕರೂ ಆದ ಸ್ವಾದಿಖ್ ಸಖಾಫಿ ಅಲ್ ಮುಈನೀ ಗಡಿಯಾರ್ ಉಪಯುಕ್ತ ಮಾಹಿತಿಗಳನ್ನೊಳಗೊಂಡ
“ಮಫಾಝ”ತರಗತಿ ನಡೆಸಿಕೊಟ್ಟರು.ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಕಲಂದರ್ ಪಾಟ್ರಕೋಡಿ, ಮಾಜಿ ಪ್ರಧಾನ ಕಾರ್ಯದರ್ಶಿ ಸಲೀಂ ಮಾಣಿ,ಎಸ್ವೈಎಸ್ ಸೂರಿಕುಮೇರು ನಾಯಕರಾದ ಯೂಸುಫ್ ಹಾಜಿ,ಹನೀಫ್ ಸಂಕ,ಮುಂತಾದವರು ಉಪಸ್ಥಿತರಿದ್ದರು.
ಕೊನೆಯಲ್ಲಿ ಮುಈನುದ್ದೀನ್ ಮಾಣಿ,ಇಸಾಕ್ ಮಾಣಿ,ಜಮಾಲ್ ಮಾಣಿ,ಸವಾದ್ ಮಾಣಿ,ಸೈಫುಲ್ಲಾ ಮಾಣಿ, ಇಮ್ರಾನ್,ಜಾಬಿರ್,ಆಶಿಕ್ ಸೂರಿಕುಮೇರು ನೇತೃತ್ವದಲ್ಲಿ ಬುರ್ದಾ ಆಲಾಪನೆ ನಡೆಯಿತು.ಮುಈನುದ್ದೀನ್ ಮಾಣಿ ಧನ್ಯವಾದಗೈದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ