ಬೆಂಗಳೂರು: ನೈಋುತ್ಯ ಮುಂಗಾರು ಕರಾವಳಿ ಹಾಗೂ ಮಲೆನಾಡಿನಲ್ಲಿ ಚುರುಕಾಗಿದ್ದು, ಉತ್ತರ ಒಳನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿದೆ. ಶನಿವಾರ ಮಧ್ಯಾಹ್ನದಿಂದಲೇ ಮೂರು ದಿನ ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿಅತಿ ಭಾರಿ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯಕ್ಕೆ ಹೊಂದಿಕೊಂಡಿರುವ ಕೇರಳದ ಕಾಸರಗೋಡು, ಕಣ್ಣೂರು ಜಿಲ್ಲೆಗಳಲ್ಲಿ ಎರಡು ದಿನ ರೆಡ್ ಅಲರ್ಟ್ಗೆ ಸೂಚಿಸಿದ್ದು, ಕರಾವಳಿ ತೀರದುದ್ದಕ್ಕೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಭಾನುವಾರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ಮೈಸೂರು, ಚಾಮರಾಜನಗರ ಹಾಗೂ ಮಂಡ್ಯದಲ್ಲಿ ಯೆಲ್ಲೊಅಲರ್ಟ್ ಘೋಷಿಸಲಾಗಿದೆ. ಸೆ.23ರವರೆಗೆ ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಕೊಡಗಿನಲ್ಲಿ ಆರೆಂಜ್, ರೆಡ್ ಅಲರ್ಟ್ ಘೋಷಣೆ
ಕೊಡಗಿನಲ್ಲಿ ಶನಿವಾರ(ಸೆ.19) ದಿಂದ ಸೋಮವಾರ (ಸೆ.21) ಬೆಳಗ್ಗೆ 8.30 ತನಕ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸೆ.21 ರಿಂದ ಸೆ.22ರ ಬೆಳಗ್ಗೆ ತನಕ ರೆಡ್ ಅಲರ್ಟ್ ಅನ್ನು ಭಾರತೀಯ ಹವಾಮಾನ ಇಲಾಖೆ ಘೋಷಿಸಿದೆ.
ಕೊಡಗು ಸೇರಿದಂತೆ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಅಲ್ಲಲ್ಲಿ ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯೂ ಸುರಿಯುವ ಸಾಧ್ಯತೆ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಸಮಯದಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ