ನವದೆಹಲಿ,ಸೆ.23: ಸೌದಿ ಅರೇಬಿಯಾದಿಂದ ಭಾರತಕ್ಕೆ ವಂದೇ ಭಾರತ್ ವಿಮಾನಯಾನ ಮುಂದುವರಿಯಲಿದೆ ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ತಿಳಿಸಿದೆ. ಆದರೆ ಭಾರತದಿಂದ ಸೌದಿಗೆ ಪ್ರಯಾಣಿಕರನ್ನು ಕೊಂಡೊಯ್ಯಲಾಗುವುದಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.
ಭಾರತದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉಭಯ ದೇಶಗಳ ವಿಮಾನಯಾನ ಸೇವೆಯನ್ನು ರದ್ದು ಪಡಿಸಿರುವುದಾಗಿ ಸೌದಿ ನಾಗರಿಕ ವಿಮಾನಯಾನ ಪ್ರಾಧಿಕಾರ ವಿಮಾನಯಾನ ಸಂಸ್ಥೆಗಳಿಗೆ ಸೂಚನೆಗಳನ್ನು ನೀಡಿದೆ. ಈ ನಿಟ್ಟಿನಲ್ಲಿ ಏರ್ ಇಂಡಿಯಾ ಎಕ್ಸ್ಪ್ರೆಸ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸ್ಪಷ್ಟನೆಯನ್ನು ನೀಡಿದೆ.
ಸೌದಿ ಅರೇಬಿಯಾದ ಈ ನಿರ್ಧಾರದಿಂದ ರಜೆಯಲ್ಲಿ ಊರಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದವರು, ಕೆಲಸ ಕಳೆದುಕೊಂಡವರು, ಊರಿನಿಂದ ಸೌದಿಗೆ ಮರಳಲು ತಯಾರಿ ನಡೆಸುತ್ತಿದ್ದವರು ತೊಂದರೆಗೀಡಾಗಿದ್ದಾರೆ.
ಇತರ ದೇಶಗಳಿಂದ ಸೌದಿ ಅರೇಬಿಯಾಕ್ಕೆ ಭೇಟಿ ನೀಡುವವರು ಭೇಟಿಯ ಹಿಂದಿನ 14 ದಿನಗಳಲ್ಲಿ ಭಾರತಕ್ಕೆ ಭೇಟಿ ನೀಡಿರಬಾರದು ಎಂಬ ಶರತ್ತನ್ನು ವಿಧಿಸಲಾಗಿದೆ. ಈ ನಿಟ್ಟಿನಲ್ಲಿ ದುಬೈ ಮತ್ತಿತರ ಕೊಲ್ಲಿ ರಾಷ್ಟ್ರಗಳಿಗೆ ತೆರಳಿ, ಆ ಮೂಲಕ ಸೌದಿಗೆ ಪ್ರಯಾಣಿಸಲು ಇಚ್ಛಿಸುವವರು ಅಲ್ಲಿ 14 ದಿನ ಉಳಿದ ಬಳಿಕವಷ್ಟೇ ಸೌದಿಗೆ ಪ್ರಯಾಣಿಸಲು ಸಾಧ್ಯವಾಗಲಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ