ಮಂಗಳೂರು: ಸುನ್ನೀ ಜಂಇಯ್ಯತುಲ್ ಉಲಮಾ ರಾಜ್ಯಾಧ್ಯಕ್ಷರು, ಉಡುಪಿ,ಚಿಕ್ಕಮಂಗಳೂರು, ಹಾಸನ ಜಿಲ್ಲಾ ಸಂಯುಕ್ತ ಖಾಝಿ, ಕೇಂದ್ರ ಮುಶಾವರ ಸದಸ್ಯರು ತಾಜುಲ್ ಫುಖಹಾಅ್ ಅಲ್ಹಾಜ್ ಪಿ.ಎಂ. ಇಬ್ರಾಹೀಂ ಮುಸ್ಲಿಯಾರ್ ‘ಬೇಕಲ್ ಉಸ್ತಾದ್’ (71) ವಫಾತಾದರು.
ದೇವಬಂದ್ ಅರಬಿಕ್ ಕಾಲೇಜಿನಿಂದ ಪದವಿ ಪಡೆದಿದ್ದ ಅವರು, ಸೂರಿಂಜೆ ಮತ್ತು ಬಂಟ್ವಾಳದ ಜುಮಾ ಮಸೀದಿಗಳಲ್ಲಿ ತಲಾ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಬಳಿಕ ಸುದೀರ್ಘ 43 ವರ್ಷಗಳಿಂದ ಬೇಕಲದಲ್ಲಿ ಮುದರ್ರಿಸ್ ಆಗಿ ಸೇವೆ ಸಲ್ಲಿಸುವ ಮೂಲಕ ‘ಬೇಕಲ್ ಉಸ್ತಾದ್’ ಎಂದೇ ಜನಪ್ರಿಯರಾಗಿದ್ದರು.
ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸುನ್ನಿ ಜಂಇಯ್ಯತುಲ್ ಉಲಮಾದ ರಾಜ್ಯಾಧ್ಯಕ್ಷರಾಗಿದ್ದ ಬೇಕಲ್ ಉಸ್ತಾದ್ ಅವರು ಜಾಮಿಯಾ ಸಅದಿಯಾ ಅರಬಿಯಾ ಶರೀಅತ್ ಕಾಲೇಜಿನ ಪ್ರಾಚಾರ್ಯರು, ಸಮಸ್ತ ಉಲಮಾ ಒಕ್ಕೂಟದ ಕೇಂದ್ರ ಮುಶಾವರ ಸದಸ್ಯರಾಗಿ ಅಲ್ ಅನ್ಸಾರ್ ಪತ್ರಿಕೆಯ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಫೂಡಲ್ ಎಂಬಲ್ಲಿನ ಮುಹಮ್ಮದ್ ಮತ್ತು ಖದೀಜಾ ದಂಪತಿಯ ಪುತ್ರನಾಗಿ 1949ರಲ್ಲಿ ಜನಿಸಿದ್ದ ಅವರು ನರಿಂಗಾನ ಗ್ರಾಮದ ಡಿಜಿ ಕಟ್ಟೆಯ ಶಾಲೆಯಲ್ಲಿ 7ನೆ ತರಗತಿ ಕಲಿತ ಬಳಿಕ ಧಾರ್ಮಿಕ ವಿದ್ಯಾಭ್ಯಾಸ ಕಲಿಯಲು ಆಸಕ್ತಿ ವಹಿಸಿದ್ದರು. ಧಾರ್ಮಿಕ ಕ್ಷೇತ್ರದಲ್ಲಿ ಸಲ್ಲಿಸಿದ ಅಪ್ರತಿಮ ಸೇವೆಗೆ ‘ತಾಜುಲ್ ಫುಖಹಾಅ್’ ಎಂಬ ಬಿರುದು ಪಡೆದಿದ್ದಾರೆ.
ಅವರು ಕರ್ಮಶಾಸ್ತ್ರ, ಖಗೋಳಶಾಸ್ತ್ರದ ಬಗ್ಗೆ ಉನ್ನತ ಜ್ಞಾನ ಹೊಂದಿದ್ದರು.ಕರ್ನಾಟಕದ ಹೆಮ್ಮೆಯಾಗಿದ್ದ ಶೈಖುನಾ, ಧಾರ್ಮಿಕ ಕ್ಷೇತ್ರದ ಅಧಿಕೃತ ಧ್ವನಿಯಾಗಿದ್ದರು. ಉಸ್ತಾದರ ವಫಾತ್ ಅಕ್ಷರಶಃ ಸುನ್ನತ್ ಜಮಾಅತ್’ಗೆ ತುಂಬಲಾರದ ನಷ್ಟವಾಗಿದೆ.
ಕರ್ನಾಟಕ ಸುನ್ನೀ ಆನ್‌ಲೈನ್ ಕ್ಲಾಸ್‌ರೂಮ್ KSOCR ಮತ್ತು ಜನಧ್ವನಿ ಬಳಗ ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ
ಜನವರಿಯಲ್ಲಿ ಸಿಎಂ ಬೊಮ್ಮಾಯಿ ಬದಲಾವಣೆ ಖಚಿತ- ಸಿಎಂ ಇಬ್ರಾಹಿಂ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಭೆಯಲ್ಲಿ ಕೈಗೊಂಡ ನಿರ್ಣಯಗಳು
ಮತಾಂತರ ನಿಷೇಧ ಮಸೂದೆ- ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಕ್ರೈಸ್ತರು