ಜಿದ್ದಾ: ಸೌದಿ ಅರೇಬಿಯಾದ ಖಮೀಸ್ ಮುಶೈತ್ ನಲ್ಲಿ ಕೆಲಸ ಮಾಡುತ್ತಿದ್ದ ಬೆಂಗಳೂರಿನ ಜಾಫರ್ ಖಾನ್ ಎಂಬವರು ಇತ್ತೀಚೆಗೆ ಹೃದಯಾಘಾತದಲ್ಲಿ ನಿಧನರಾಗಿದ್ದರು.
ಮೃತ ವ್ಯಕ್ತಿಯ ದಫನ ಕಾರ್ಯಕ್ಕಾಗಿ ವಿಷಯವನ್ನು ತಿಳಿದು ಕೂಡಲೇ ಕಾರ್ಯಪ್ರವೃತ್ತರಾದ ಕೆಸಿಎಫ್ ಖಮೀಸ್ ಮುಶೈತ್ ಸೆಕ್ಟರ್ ಸದಸ್ಯರಾದ ಅಬ್ದುಲ್ ಮುಜೀಬ್ ಬೆಂಗಳೂರು ಹಾಗೂ ಅಸ್ಲಂ ಬೆಂಗಳೂರು ಅವರು ಕೂಡಲೇ ಕೆ ಸಿ ಎಫ್ ಖಮೀಸ್ ಸೆಕ್ಟರ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಬನ್ನೂರು ಅವರ ನೇತೃತ್ವದಲ್ಲಿ ಅವರ ಕುಟುಂಬಸ್ಥರನ್ನು ಸಂಪರ್ಕಿಸಿ ಮರಣೋತ್ತರ ಕ್ರಿಯೆಗೆ ಬೇಕಾದ ಎಲ್ಲಾ ದಾಖಲೆಗಳನ್ನು ಕ್ರೋಢೀಕರಿಸಿ ಅಬ್ದುಲ್ ರಝಾಕ್ ಮದೀನ ಅವರ ಸಹಕಾರದೊಂದಿಗೆ ಆಯಾ ಕಚೇರಿಗಳಿಗೆ ತಲುಪಿಸಿ ಮೃತದೇಹದ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಲಾಯಿತು.
ದಿನಾಂಕ 21/9/2017 ರಂದು ಕೆಸಿಎಫ್ ಕಾರ್ಯಕರ್ತರ ಸಹಕಾರದೊಂದಿಗೆ ಅಂತ್ಯಕ್ರಿಯೆಯನ್ನು ನಡೆಸಲಾಯಿತು.
ಈ ರೀತಿ ಹಲವಾರು ಸಾಂತ್ವನ ಸೇವೆಗಳಿಗೆ ನೇತೃತ್ವವನ್ನು ನೀಡುವ ಕೆಸಿಎಫ್ ಖಮೀಸ್ ಸೆಕ್ಟರ್ ಅಧ್ಯಕ್ಷರು ಹಾಗೂ ಸದಸ್ಯರ ಕಾರ್ಯ ಶ್ಲಾಘನೆಗೆ ಪಾತ್ರವಾಗಿದೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ