ಬೆಂಗಳೂರು ,ಸೆ. 27:ವಿವಿಧ ರೈತ ಸಂಘಟನೆಗಳು ರಾಜ್ಯ ಸರ್ಕಾರದ ಕೃಷಿ ವಿರೋಧಿ ನೀತಿ ಹಾಗೂ ಕಾಯ್ದೆಗಳನ್ನ ವಿರೋಧಿಸಿ ಸೆ. 28ರಂದು ಕರ್ನಾಟಕ ಬಂದ್ಗೆ ಕರೆ ನೀಡಿವೆ. ನಾಳೆ ರೈತರು ಹಾಗೂ ಕೆಲ ಸಂಘಟನೆಗಳು ಪ್ರತಿಭಟನೆ ಮಾಡುತ್ತಿರುವ ಹಿನ್ನಲೆಯಲ್ಲಿ ನಗರದಲ್ಲಿ ಸುಮಾರು 2 ಸಾವಿರಕ್ಕೂ ಹೆಚ್ಚು ಪೊಲೀಸರು ಭದ್ರತೆಗೆ ನಿಯೋಜನೆ ಮಾಡುವ ಸಾಧ್ಯತೆ ಇದೆ.
ಟೌನ್ ಹಾಲ್, ರೈಲ್ವೆ ಸ್ಟೇಷನ್, ಮೆಜೆಸ್ಟಿಕ್ ಹಾಗೂ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಪ್ರಮುಖವಾಗಿ ಪ್ರತಿಭಟನೆ ನಡೆಯಲಿದೆ. ಹೀಗಾಗಿ ಈ ಸ್ಥಳಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲು ನಿರ್ಧರಿಸಲಾಗಿದೆ. ಪ್ರತಿಭಟನೆ ತೀವ್ರತೆ ನೋಡಿಕೊಂಡು ಭದ್ರತೆ ಹೆಚ್ಚಿಸಲು ಹಿರಿಯ ಅಧಿಕಾರಿಗಳು ನಿರ್ಧರಿಸಿದ್ದಾರೆ. ರಾಜ್ಯದ ವಿವಿಧ ಕಡೆಗಳಲ್ಲೂ ಪ್ರತಿಭಟನೆ ನಡೆಯಲಿದೆ.
ಟೌನ್ ಹಾಲ್, ಕಾರ್ಪೋರೇಷನ್ ಸರ್ಕಲ್, ಮೈಸೂರು ಬ್ಯಾಂಕ್ ರಸ್ತೆ ಕೆಲಕಾಲ ಬಂದ್ ಆಗುವ ಸಾಧ್ಯತೆ ಇದೆ. ಕರವೇ ಕಾರ್ಯಕರ್ತರಿಂದ ರ್ಯಾಲಿ ನಡೆಯಲಿದ್ದು ಬಿಗಿ ಪೊಲೀಸ್ ಬಂದೋಬಸ್ತ್ ಯೋಜಿಸಲಾಗಿದೆ.
ಇನ್ನು, ಎಂದಿನಂತೆ ಸರ್ಕಾರಿ ಸ್ವಾಮ್ಯದ ವಾಹನಗಳು ಓಡಾಡಲಿವೆ. ಕೆಎಸ್ಆರ್ಟಿಸಿ, ಬಿಎಂಟಿಸಿ ಹಾಗೂ ಮೆಟ್ರೋ ಓಡಾಟದಲ್ಲಿ ಯಾವುದೇ ವ್ಯತ್ಯಾಯ ಇರುವುದಿಲ್ಲ. ಈಗಾಗಲೇ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆಯಾಗಿವೆ. ಅಂಗಡಿ ಮುಂಗಟ್ಟುಗಳು, ಮಾಲ್ಗಳು ಮುಚ್ಚಿರಲಿವೆ. ಆಟೋ, ಓಲಾ, ಊಬರ್ ಮುಂತಾದ ಖಾಸಗಿ ಸಾರಿಗೆ ವ್ಯವಸ್ಥೆ ಬಂದ್ಗೆ ಬೆಂಬಲ ಸೂಚಿಸಿದ್ದು, ಇವು ಸಂಪೂರ್ಣ ಸ್ತಬ್ಧವಾಗಲಿದೆ. ಹೋಟೆಲ್ಗಳು ನೈತಿಕ ಬೆಂಬಕ ಮಾತ್ರ ಇರುವುದರಿಂದ ಅವು ತೆರೆದಿರಲಿವೆ.
ಉಳಿದಂತೆ ಮೆಡಿಕಲ್ ಶಾಪ್, ಆಸ್ಪತ್ರೆ, ಪೆಟ್ರೊಲ್ ಬಂಕ್, ತರಕಾರಿ-ಹಣ್ಣು ಮುಂತಾದ ಅಗತ್ಯ ಸೇವೆಗಳು ಎಂದಿನಂತೆ ಮುಂದುವರೆಯಲಿವೆ.
ಏನಿರುತ್ತೆ? ಏನಿರಲ್ಲ?:
ಕರ್ನಾಟಕ ಬಂದ್ ವೇಳೆ ಹಾಲು, ಹಣ್ಣು, ತರಕಾರಿ, ಮೆಡಿಕಲ್ ಸ್ಟೋರ್ಸ್, ಆಸ್ಪತ್ರೆ ಸೇವೆಗಳು ಇರಲಿವೆ. ಹೋಟೆಲ್ ಗಳು ಎಂದಿನಂತೆ ಓಪನ್ ಇರಲಿದ್ದು, ಕೆಎಸ್‌ಆರ್ ಟಿಸಿ, ಬಿಎಂಟಿಸಿ, ಮೆಟ್ರೋ, ರೈಲು, ವಿಮಾನ ಸಂಚಾರ ಇರಲಿದೆ.
ಓಲಾ-ಉಬರ್, ಆಟೋ-ಟ್ಯಾಕ್ಸಿ ಸಂಘಗಳು ಬಂದ್ ಗೆ ಬೆಂಬಲ ನೀಡಿದ್ದು, ಈ ಸೇವೆಗಳು ಇರುವುದಿಲ್ಲ. ಖಾಸಗಿ ಬಸ್, ಲಾರಿ ಸೇವೆಗಳು ಬಂದ್ ಇರಲಿವೆ ಎನ್ನಲಾಗಿದೆ. ಅಂಗಡಿ ಮುಂಗಟ್ಟು ಕ್ಲೋಸ್, ಮಾಲ್ ಗಳು ಓಪನ್ ಆಗಲ್ಲ, ಪ್ರತಿಭಟನೆಯ ತೀವ್ರತೆ ನೋಡಿಕೊಂಡು ಕೈಗಾರಿಕೆಗಳು, ಕಂಪನಿಗಳು ಮುಚ್ಚುವ ಬಗ್ಗೆ ನಿರ್ಧಾರ ಮಾಡಲು ನಿರ್ಧರಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ
ಜನವರಿಯಲ್ಲಿ ಸಿಎಂ ಬೊಮ್ಮಾಯಿ ಬದಲಾವಣೆ ಖಚಿತ- ಸಿಎಂ ಇಬ್ರಾಹಿಂ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಭೆಯಲ್ಲಿ ಕೈಗೊಂಡ ನಿರ್ಣಯಗಳು
ಮತಾಂತರ ನಿಷೇಧ ಮಸೂದೆ- ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಕ್ರೈಸ್ತರು