janadhvani

Kannada Online News Paper

ಕಲ್ಲಡ್ಕ : ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯ ವಿರುದ್ದ ಪ್ರತಿಭಟನೆ

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯನ್ನು ಖಂಡಿಸಿ ಎಸ್.ಡಿ.ಪಿ.ಐ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಕಲ್ಲಡ್ಕ ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾನಿರತರನ್ನು ಉದ್ದೇಶಿಸಿ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಮಾತನಾಡಿ ಮುಂದಿನ ಹತ್ತು ದಿನಗಳೊಳಗಾಗಿ ಹೆದ್ದಾರಿ ಗುಂಡಿಗಳನ್ನು ಮುಚ್ಚದೇ ಇದ್ದಲ್ಲಿ ಮುಂದೆ ಹೆದ್ದಾರಿಯನ್ನು ತಡೆಯುವ ಮೂಲಕ ಬೃಹತ್ ಪ್ರತಿಭಟನೆಯನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಈ ಸಂದರ್ಭ ಮಾತನಾಡಿದ ರಿಯಾಝ್ ಕಡಂಬು ಜಿಲ್ಲೆಯ ಸಂಸದರಿಗೆ ಅಬಿವೃದ್ದಿ ಕಾರ್ಯಗಳ ಕುರಿತ ಕನಿಷ್ಠ ಕಾಳಜಿಯೂ ಇಲ್ಲದಾಗಿದ್ದು ಕೇವಲ ಆರೋಪ, ಪ್ರತ್ಯಾರೋಪಗಳಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಪತ್ರಿಭಟನಾ ಸಭೆಯಲ್ಲಿ ಎಸ್.ಡಿ.ಪಿ.ಐ ಬಂಟ್ವಾಳ ಕ್ಷೇತ್ರ ಪ್ರಧಾನಕಾರ್ಯದರ್ಶಿಗಳಾದ ಕಲಂದರ್ ಪರ್ತಿಪ್ಪಾಡಿ, ಪಾಪ್ಯುಲರ್ ಫ್ರಂಟ್ ವಿಟ್ಲ ತಾಲೂಕು ಅಧ್ಯಕ್ಷರಾದ ಝಕರಿಯಾ ಗೋಳ್ತಮಜಲು, ಕ್ಷೇತ್ರ ಸಮಿತಿ ಸದಸ್ಯರಾದ ಫೈಝಲ್ ಮಂಚಿ, ಸತ್ತಾರ್ ಕಲ್ಲಡ್ಕ, ಸಿದ್ದೀಖ್ ಪನಾಮಾ, ಗ್ರಾಮಪಂಚಾಯತ್ ಸದಸ್ಯರಾದ ಯೂಸುಫ್ ಹೈದರ್, ಗೋಳ್ತಮಜಲು ಗ್ರಾಮ ಸಮಿತಿ ಅಧ್ಯಕ್ಷರಾದ ಜವಾಝ್ ಕಲ್ಲಡ್ಕ ಮೊದಲಾದವರು ಉಪಸ್ಥಿತರಿದ್ದರು. ಶಾಕೀರ್ ಅಳಿಕೆಮಜಲು ಸ್ವಾಗತಿಸಿ, ದನ್ಯವಾದಗೈದರು.

ವರದಿ : ಕೆ.ಕೆ.ಜಬ್ಬಾರ್ ಕಲ್ಲಡ್ಕ

error: Content is protected !! Not allowed copy content from janadhvani.com