ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ತಮ್ಮ ಸಚಿವ ಸ್ಥಾನಕ್ಕೆ ಸಿಟಿ ರವಿ ಸಲ್ಲಿಸಿದ್ದ ರಾಜಿನಾಮೆಯನ್ನು ಸಿಎಂ ಬಿಎಸ್ ಯಡಿಯೂರಪ್ಪ ಅಂಗೀಕರಿಸಿಲ್ಲ ಎಂದು ತಿಳಿದುಬಂದಿದೆ.
ಈ ಬಗ್ಗೆ ಯುಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದ್ದು, ಒಬ್ಬರಿಗೆ ಒಂದೆ ಹುದ್ದೆ ಅಥವಾ ಸ್ಥಾನವೆಂಬ ಬಿಜೆಪಿ ಅಲಿಖಿತ ನಿಯಮದಂತೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಹಿನ್ನೆಲೆ, ಸಿ.ಟಿ.ರವಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿ.ಟಿ.ರವಿ ಅವರು ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾಗಿದ್ದರು.
ನಿನ್ನೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕಾವೇರಿಯಲ್ಲಿ ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.ಈ ಮೊದಲು ಸಿ.ಟಿ.ರವಿ ಅವರು ಅಕ್ಟೋಬರ್ 2ರ ಗಾಂಧಿ ಜಯಂ ತಿಯಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ಚಿಕ್ಕಮಗಳೂರಿನಿನಲ್ಲಿ ಘೋಷಿಸಿದ್ದರು. ಸಿಟಿ ರವಿ ಅವರ ರಾಜೀನಾಮೆಯನ್ನು ಮುಖ್ಯಮಂಮಂತ್ರಿ ಯಡಿಯೂರಪ್ಪ ಇನ್ನೂ ಅಂಗೀಕರಿಸಿಲ್ಲ ಎನ್ನಲಾಗಿದೆ. ನಾಳೆ ಅಂದರೆ ಅ.5ರಂದು ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಲಿದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ.ಜೊತೆಗೆ ಅಕ್ಟೋಬರ್ 5 ಮತ್ತು 6 ರಂದು ದೆಹಲಿಯಲ್ಲಿ ಪಕ್ಷದ ಸಂಘಟನಾ ಆಯೋಜಿಸಲಾಗಿದ್ದು ಸಭೆಯಲ್ಲೂ ಅವರು ಪಾಲ್ಗೊಳ್ಳಲಿದ್ದಾರೆ.
ಸಿ.ಟಿ.ರವಿ ನೇಮಕಾತಿ ಬೆನ್ನಲ್ಲೇ ಸಚಿವ ಸಂಪುಟ ವಿಸ್ತರಣೆ,ಪುನಾರಚನೆಗೆ ಬಗ್ಗೆ ಪಕ್ಷದ ವಲಯ ದಲ್ಲಿ ಚೆರ್ಚೆ ಆರಂಭವಾಗಿದೆ.ಮತ್ತೊಂದೆಡೆ ನಾಯಕತ್ವ ಬದಲಾವಣೆ ಚೆರ್ಚೆಯೂ ಬಿರುಸಾಗಿ ಸಾಗಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ