ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಿಸುವಲ್ಲಿ, ಮಾರ್ಗಸೂಚಿ ಪಾಲಿಸದವರ ವಿರುದ್ದ ಸರ್ಕಾರ ಘೋಷಿಸಿದ್ದ ದುಬಾರಿ ದಂಡ ವಸೂಲಾತಿ ಕ್ರಮಕ್ಕೆ ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಮಾಸ್ಕ್ ಧರಿಸದವರ ಮೇಲೆ ಹಾಕಲಾಗುತ್ತಿದ್ದ ದಂಡ ಶುಲ್ಕವನ್ನು ಇಳಿಕೆ ಮಾಡಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಆದೇಶಿಸಿದ್ದಾರೆ.
ಈ ಮುಂಚೆ ಮಾಸ್ಕ್ ಧರಿಸದವರ ವಿರುದ್ಧ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ 1000 ರೂ. ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 500ರೂ ದಂಡ ವಿಧಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.
ನಂತರ ಬೆಂಗಳೂರು ನಗರದಲ್ಲಿ ಬಿಬಿಎಂಪಿ ಮಾರ್ಷಲ್ ಗಳು ಹಾಗೂ ಪೊಲೀಸರು ಅಕ್ಷರಶಃ ದರೋಡೆಗೆ ಇಳಿದಿದ್ದರು. ರಸ್ತೆಯಲ್ಲಿ ಓಡಾಡುವವರು, ಬೈಕ್ ನಲ್ಲಿ ಪ್ರಯಾಣಿಸುವವರು, ಕೂಲಿ ಕಾರ್ಮಿಕರು, ಅಲೆಮಾರಿಗಳನ್ನು ಹಿಡಿದು ಬಲವಂತದಿಂದ ಸಾವಿರ ರೂಪಾಯಿ ದಂಡ ವಸೂಲಿ ಮಾಡುತ್ತಿದ್ದರು. ಈ ದುಬಾರಿ ದಂಡಕ್ಕೆ ರಾಜ್ಯದೆಲ್ಲೆಡೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.
ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ದಂಡ ಪ್ರಮಾಣ ಇಳಿಕೆ ಮಾಡಿ ಆದೇಶ ಹೊರಡಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ನಗರ ಪ್ರದೇಶದಲ್ಲಿ ಮಾಸ್ಕ್ ಧರಿಸದವರಿಗೆ 250 ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 100 ರೂ. ದಂಡ ವಿಧಿಸಲು ಆದೇಶಿಸಿದೆ.
‘ಜೀವ ಮತ್ತು ಜೀವನ’ ಎರಡನ್ನೂ ಸರಿದೂಗಿಸಿಕೊಂಡ ಹೋಗಲು ಸರ್ಕಾರ ಸರ್ವ ಪ್ರಯತ್ನ ಮಾಡುತ್ತಿದೆ. ಜನರು ಸ್ವಯಂ ಪ್ರೇರಿತರಾಗಿ ಮಾಸ್ಕ್ , ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸಾರ್ವಜನಿಕರ ವಿರೋಧ ಹಾಗೂ ತಜ್ಞರ ಸಲಹೆಯಂತೆ ಈ ದಂಡದ ದರ ಇಳಿಸಲಾಗಿದೆ ಈ ಮೂಲಕ ಸರ್ಕಾರದೊಂದಿಗೆ ಕೈಜೋಡಿಸುವಂತೆ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ