janadhvani

Kannada Online News Paper

ಬಾಲ ಕಾರ್ಮಿಕತೆ ಹೆಚ್ಚಾಗುವ ಸಾಧ್ಯತೆ- ಶಾಲೆ ಆರಂಭಿಸಲು ಮಕ್ಕಳ ಹಕ್ಕು ಆಯೋಗ ಶಿಫಾರಸು

ಬೆಂಗಳೂರು: ಮಕ್ಕಳಲ್ಲಿ ಕೋವಿಡ್-19 ವಿರುದ್ಧ ಹೋರಾಡುವ ರೋಗ ನಿರೋಧಕ ಶಕ್ತಿ ಹೆಚ್ಚಿದೆ ಎಂದು ಹೇಳಿ ರಾಜ್ಯ ಮಕ್ಕಳ ಹಕ್ಕು ಆಯೋಗ ಶಾಲೆಗಳನ್ನು ಪುನರಾರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿ ಪತ್ರ ಬರೆದಿದೆ.

ಈ ನಿಟ್ಟಿನಲ್ಲಿ ತಕ್ಷಣವೇ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಅದು ಸೂಚಿಸಿದೆ. ಈ ಶೈಕ್ಷಣಿಕ ವರ್ಷವನ್ನು ಪರೀಕ್ಷೆರಹಿತ ವರ್ಷವೆಂದು ಘೋಷಿಸಿ ಮಾರ್ಗಸೂಚಿ ರಚಿಸಿ ಸರ್ಕಾರದ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಕಳುಹಿಸಿದೆ.

ಶಿಫಾರಸಿನಲ್ಲಿ ಏನಿದೆ?: ಕೋವಿಡ್-19 ಮಧ್ಯೆ ಶಾಲೆಗಳಲ್ಲಿ ಭಯಮುಕ್ತ ವಾತಾವರಣವನ್ನು ರಾಜ್ಯ ಸರ್ಕಾರ ಕಲ್ಪಿಸಿಕೊಡಬೇಕು. ಶಾಲೆಗಳು ಆರಂಭವಾಗದಿದ್ದರೆ ಅನೇಕ ಕಡೆಗಳಲ್ಲಿ ಬಾಲ ಕಾರ್ಮಿಕತೆ, ಮಕ್ಕಳ ಸಾಗಾಟ ಮತ್ತು ಬಾಲ್ಯ ವಿವಾಹದಂತಹ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದೆ.

  • 30ಕ್ಕಿಂತ ಕಡಿಮೆ ಮಕ್ಕಳನ್ನು ಸೇರಿಸಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸಿ.
  • 15 ದಿನಗಳವರೆಗೆ ಅರ್ಧ ದಿನ ಮಾತ್ರ ಶಾಲೆಗಳು ಇರಲಿ.
  • ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿರುವ ತರಗತಿಗಳಲ್ಲಿ ಹಂತ ಹಂತವಾಗಿ ಶಾಲೆಗಳನ್ನು ತೆರೆಯಿರಿ.
  • ಮಕ್ಕಳ ಶುಚಿತ್ವಕ್ಕೆ ಶಾಲೆಗಳಲ್ಲಿ ಮೂಲ ಸೌಕರ್ಯಗಳಿರಬೇಕು.
  • ಕೊರೋನಾ ಸೋಂಕು ಹರಡುವ ಬಗ್ಗೆ ಶಾಲೆಗಳು ಮಕ್ಕಳಿಗೆ ಮತ್ತು ಪೋಷಕರಿಗೆ ಜಾಗೃತಿ ಮೂಡಿಸಬೇಕು.
  • 11 ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
  • ಕರ್ತವ್ಯಕ್ಕೆ ಹಾಜರಾಗುವ ಮುನ್ನ ಶಿಕ್ಷಕರು ಕಡ್ಡಾಯವಾಗಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡು ಬರಬೇಕು.
  • ಶಾಲೆಗಳಲ್ಲಿ ಕೈ ತೊಳೆಯುತ್ತಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ರೂಢಿಸಿಕೊಳ್ಳಬೇಕು.
  • ಪ್ರಾಥಮಿಕ, ಮಾಧ್ಯಮಿಕ, ಪ್ರೌಢಶಾಲಾ ಮಕ್ಕಳಿಗೆ ಪ್ರತ್ಯೇಕ ಶಿಷ್ಟಾಚಾರವನ್ನು ಹೊರಡಿಸಬೇಕು.

error: Content is protected !! Not allowed copy content from janadhvani.com