janadhvani

Kannada Online News Paper

ಚುನಾವಣೆಯಲ್ಲಿ ಸೋತರೆ ದೇಶ ತೊರೆಯುವೆ- ಟ್ರಂಪ್

ಜಾರ್ಜಿಯಾ: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಇನ್ನೂ ಕೇವಲ 15 ದಿನಗಳಷ್ಟೇ ಬಾಕಿ ಇದೆ. ಈ ನಡುವೆ ಅಮೆರಿಕದಲ್ಲಿ ಅಧ್ಯಕ್ಷೀಯ ಅಭ್ಯರ್ಥಿಗಳಾದ ಜೋ ಬಿಡೆನ್ ಮತ್ತು ಡೋನಾಲ್ಡ್ ಟ್ರಂಪ್ ನಡುವೆ ಅಧ್ಯಕ್ಷ ಸ್ಥಾನ್ಕಕೆ ಭಾರೀ ಪೈಪೋಟಿ ನಡೆಯುತ್ತಿದ್ದು ಇಬ್ಬರೂ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.

ಈ ನಡುವೆ ಚುನಾವಣಾ ರ‍್ಯಾಲಿಯಲ್ಲಿ ಡೊನಾಲ್ಡ್ ಟ್ರಂಪ್ ಆಡಿರುವ ಮಾತು ಇಂದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಭಾನುವಾರ ಜಾರ್ಜಿಯಾದ ಮ್ಯಾಕನ್ ನಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್, “ಈ ಚುನಾವಣೆಯಲ್ಲಿ ನಾನು ಗೆಲುವು ಸಾಧಿಸಿದರೆ ನೀವು ನನ್ನನ್ನು ಮತ್ತೆ ನೋಡಬಹುದು, ಅಕಸ್ಮಾತ್ ನಾನು ಸೋಲನುಭವಿಸಿದರೆ ಭಾಗಶಃ ಈ ದೇಶವನ್ನೇ ತೊರೆಯಬೇಕಾಗುತ್ತದೆ” ಎಂದು ಹೇಳಿಕೆ ನೀಡಿದ್ದಾರೆ.

ಟ್ರಂಪ್ ಇಂತಹ ಹೇಳಿಕೆ ನೀಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಅನೇಕ ಬಾರಿ ಚುನಾವಣಾ ಪ್ರಚಾರದ ವೇಳೆ ಇದೇ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ಸಿಎನ್ಎನ್ ವರದಿ ಮಾಡಿದೆ.

ಕೊರೊನಾ ಸೋಂಕಿನಿಂದ ಗುಣಮುಖರಾಗಿ ಫ್ಲೋರಿಡಾ ಮತ್ತು ಜಾರ್ಜಿಯಾದಲ್ಲಿ ನಡೆದ ರ್‍ಯಾಲಿಗಳಲ್ಲಿ ಮಾತನಾಡಿರುವ ಡೊನಾಲ್ಡ್ ಟ್ರಂಪ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷ ಅಭ್ಯರ್ಥಿ ಜೋ ಬಿಡನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೋ ಬಿಡನ್ ಅಮೆರಿಕಾದಲ್ಲಿ ಕಮ್ಯುನಿಸಮ್ ಮತ್ತು ಪ್ರವಾಹೋಪಾದಿಯಲ್ಲಿ ಕ್ರಿಮಿನಲ್ ವಲಸಿಗರನ್ನು ತುಂಬಲಿದ್ದಾರೆ ಎಂದು ಆರೋಪಿಸಿದ್ದಾರೆ.

ಇತ್ತ, ಬಿಡೆನ್ ತಮ್ಮ ಚುನಾವಣಾ ಪ್ರಚಾರದಲ್ಲಿ, ಡೊನಾಲ್ಡ್ ಟ್ರಂಪ್ ಸರ್ಕಾರ ಕೊರೋನಾ ವೈರಸ್ ನಿಯಂತ್ರಣ ಮಾಡದ ವಿಚಾರವನ್ನು ಅಭಿಯಾನದ ಪ್ರಬಲ ವಿಷಯವನ್ನಾಗಿ ಇಟ್ಟುಕೊಂಡಿದ್ದಾರೆ. ’ಈ ವೈರಸ್ ಪವಾಡದಂತೆ ಕಣ್ಮರೆಯಾಗಲಿದೆ ಎಂದು ಅವರು ನಮಗೆ ಹೇಳುತ್ತಲೇ ಇರುತ್ತಾರೆ ಆದರೆ ವಾಸ್ತವವಾಗಿ ಅದು ಮತ್ತಷ್ಟು ಹೆಚ್ಚುತ್ತಿದೆ’ ಎಂದು ಟ್ರಂಪ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

error: Content is protected !! Not allowed copy content from janadhvani.com