ಬೆಂಗಳೂರು: ಹಿರಿಯ ಪತ್ರಕರ್ತ, ಹಾಯ್ ಬೆಂಗಳೂರು ಟ್ಯಾಬ್ಲಾಯ್ಡ್ನ ಪ್ರಧಾನ ಸಂಪಾದಕ ರವಿ ಬೆಳಗೆರೆ (62) ಶುಕ್ರವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾದರು.ಇವರು ಕಟ್ಟಿ ಬೆಳೆಸಿದ “ಹಾಯ್ ಬೆಂಗಳೂರು” ಹಾಗೂ “ಓ ಮನಸೆ” ಪತ್ರಿಕೆಗಳು ಲಕ್ಷಾಂತರ ಓದುಗರನ್ನು ಸೃಷ್ಟಿಸಿದೆ.
1995ರಲ್ಲಿ ಹಾಯ್ ಬೆಂಗಳೂರು ಆರಂಭಿಸಿದ್ದರು. ಕಾದಂಬರಿ, ಅನುವಾದ, ಕಥಾ ಸಂಕಲನ, ಅಂಕಣ ಬರಹಗಳು, ಜೀವನ ಕಥನ ಒಳಗೊಂಡ ಅವರ ಸುಮಾರು 70 ಪುಸ್ತಕಗಳು ಪ್ರಕಟಗೊಂಡಿವೆ.ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಜೀವಮಾನದ ಸಾಧನೆ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಅವರಿಗೆ ಸಂದಿವೆ.
ಹಲವು ಯುವ ಬರಹಗಾರರಿಗೆ ಸ್ಪೂರ್ತಿಯಾಗಿದ್ದ ರವಿ ಬೆಳಗೆರೆ ಅವರ “ಹಾಯ್ ಬೆಂಗಳೂರು” ಪತ್ರಿಕೆಯ “ಖಾಸ್ ಬಾತ್” ಅಂಕಣಕ್ಕಾಗಿನ ಅವರ ಕಡೆಯ ಸಾಲುಗಳು ಹೀಗಿದ್ದವು-
“ಮನಸ್ಸನ್ನು 40 ದಾಟದಂತೆ ನೋಡಿಕೊಳ್ಳುವುದರಲ್ಲಿ ಸುಖವಿದೆ. ಬರವಣಿಗೆ ಎಂಥಾವರನ್ನೂ ಒಳ್ಳೆಯವರನ್ನಾಗಿ ಮಾಡುತ್ತದಾ? ಕನಸು ಏಕಾಂತದಲ್ಲಿ ಹುಟ್ಟಬೇಕು, ಜನಜಂಗುಳಿಯಲ್ಲಿ ಬೆಳೆಯಬೇಕು.”
ಬೆಳಗೆರೆ ಅವರ ಬರವಣಿಗೆಯನ್ನೇ ಸ್ಪೂರ್ತಿಯಾಗಿರಿಸಿಕೊಂಡಿದ್ದ ಅವರ ಲಕ್ಷಾಂತರ ಅಭಿಮಾನಿಗಳಿಗೆ ಅವರ ನಿಧನ ಅಪಾರ ಶೋಕಕ್ಕೆ ಕಾರಣವಾಗಿದೆ.
















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ