ದಾವಣಗೆರೆ: ಎಸ್ಸೆಸ್ಸೆಫ್ ಇಹ್ಸಾನ್ ಕರ್ನಾಟಕ ಹಾಗೂ ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿ ವತಿಯಿಂದ ಒಮಾನಿನಲ್ಲಿ ಅಂತ್ಯ ವಿಶ್ರಮ ಗೊಳ್ಳುತ್ತಿರುವ ಸ್ವಹಾಬಿ ಮಾಝಿನ್ ಇಬ್ನ್ ಗಲೂಬ (ರ.ಅ) ರವರ ಹೆಸರಿನಲ್ಲಿ ನಿರ್ಮಿಸಲ್ಪಡುವ “ಮಾಝಿನ್ ಹೆರಿಟೇಜ್” ಇಹ್ಸಾನ್ ಸೆಂಟರ್ ಜಗಳೂರು ಇದರ ಶಿಲಾನ್ಯಾಸ ಕಾರ್ಯಕ್ರಮವು ಇಂದು ಅಸ್ಸಯ್ಯಿದ್ ಅಬೂಬಕರ್ ಸಿದ್ದೀಕ್ ತಂಙಳ್ ಅಲ್ ಹಾದಿ ತೀರ್ಥಹಳ್ಳಿ ಇವರ ನೇತೃತ್ವದಲ್ಲಿ ನೆರವೇರಿತು.

ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯು ಕಳೆದ ಏಳು ವರ್ಷಗಳಿಂದ ಅಹ್ಲುಸುನ್ನತ್ ವಲ್ ಜಮಾಅತ್ ನ ಏಳಿಗೆಗೆ ಹಾಗೂ ತನ್ನ ನಾಡಿನ ಅಭ್ಯುದಯಕ್ಕೆ ಶ್ರಮಿಸುತ್ತಿದೆ.ಕಳೆದ ಕೆಲವು ವರ್ಷಗಳಿಂದ ತನ್ನ ನಾಡಿಗೆ ಉಪಯುಕ್ತವಾದ ಹಲವಾರು ಕಾರ್ಯಕ್ರಮಗಳನ್ನು ಸಮರ್ಪಿಸಿ ಇದೀಗ ತನ್ನ ಸ್ವಂತ ಸಂಸ್ಥೆಯನ್ನು ನಿರ್ಮಿಸುವ ನಿಟ್ಟಿನಲ್ಲಿ ದಾವಣಗೆರೆ ಜಗಳೂರಿನಲ್ಲಿ ಖರೀದಿಸಿದ ಸ್ಥಳದಲ್ಲಿ ಮದರಸ ಕಟ್ಟಡ ನಿರ್ಮಾಣಕ್ಕಾಗಿ ಇಂದು ಶಿಲಾನ್ಯಾಸ ಕಾರ್ಯಕ್ರಮ ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಶಾಫಿ ಸಅದಿ , ಕೆಸಿಎಫ್ ಅಂತರಾಷ್ಟ್ರೀಯ ಸಮಿತಿಯ ಶಿಕ್ಷಣ ವಿಭಾಗದ ಕಾರ್ಯದರ್ಶಿ ಉಮರ್ ಸಖಾಫಿ ಮಿತ್ತೂರ್, ಕೆಸಿಎಫ್ ಒಮಾನ್ ಅಧ್ಯಕ್ಷರಾದ ಜನಾಬ್ ಅಯ್ಯೂಬ್ ಕೋಡಿ, ಕೆಸಿಎಫ್ ಒಮಾನ್ ನಿಝ್ವ ಝೋನ್ ಅಧ್ಯಕ್ಷರಾದ ಬಾಷ ತೀರ್ಥಹಳ್ಳಿ , ಇಹ್ಸಾನ್ ಕರ್ನಾಟಕ ಕೋಶಾಧಿಕಾರಿ ಯಾಅಕೂಬ್ ,ಇಹ್ಸಾನ್ ದಾಹಿ ಶಾಹುಲ್ ಹಮೀದ್ ಮುಸ್ಲಿಯಾರ್,ಡಾ.ರವೀಂದ್ರನ್ , ಕರ್ನಾಟಕ ಮುಸ್ಲಿಂ ಜಮಾಅತ್ ಸದಸ್ಯರಾದ ಅಬ್ದುಲ್ ರಹಮಾನ್ ಮೊಗರ್ಪಣೆ ಸುಳ್ಯ , ಮತ್ತು ಮುಬಾರಕ್ ಬಾರ್ಕೂರ್ ಹಾಗೂ ಉಮರ್ ಬೈಕಾಡಿ,ಮುಲ್ಲಾ ಅಯ್ಯೂಬ್ ಕೋಡಿ, ಅಶ್ರಫ್ ಕಲ್ಯಾಣಪುರ ಹಾಗೂ ಕೆಸಿಎಫ್ ಒಮಾನ್ ಸದಸ್ಯರು ಮತ್ತು ಎಸ್ ಎಸ್ ಎಫ್ ಕರ್ನಾಟಕ ಮತ್ತು ಎಸ್ ವೈ ಎಸ್ ಕರ್ನಾಟಕ ರಾಜ್ಯ ಮತ್ತು ಜಿಲ್ಲಾ ನೇತಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ