ಮಂಗಳೂರು: ಕರ್ನಾಟಕ ಮುಸ್ಲಿಂ ಜಮಾಅತ್ ಮಂಗಳೂರು ತಾಲೂಕು ಸಮಿತಿಯ ನೂತನ ಕಾರ್ಯದರ್ಶಿಯಾಗಿ ಇತ್ತೀಚೆಗೆ ಆಯ್ಕೆಯಾದ ,ಎಸ್.ವೈ.ಎಸ್ ದಕ್ಷಿಣ ಕನ್ನಡ ಜಿಲ್ಲಾ ಸದಸ್ಯರೂ, ಹಲವಾರು ಸಾಮಾಜಿಕ ಧಾರ್ಮಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ವೆನ್ಝ್ ಅಬ್ದುಲ್ ಅಝೀಝ್ ಅವರ ಮೇಲೆ ದುಷ್ಕರ್ಮಿಗಳು ತಲವಾರು ದಾಳಿ ನಡೆಸಿದ್ದು, ಘಟನೆಯನ್ನು ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ.
ಮೇಘ ಹಾಲ್ ನಲ್ಲಿ ನಡೆದ ಎಸ್.ವೈ.ಎಸ್ COUNT 20 ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ಹಿಂದಿರುಗುವ ಮಧ್ಯೆ ಅವರು ಕಂದಾವರ ಮಸೀದಿಯಲ್ಲಿ ನಮಾಝ್ ಮುಗಿಸಿ ತನ್ನ ಕಾರಿನ ಬಳಿ ಬರುತ್ತಿದ್ದಾಗ ಹೊಂಚು ಹಾಕಿ ಕುಳಿತಿದ್ದ ದುಷ್ಕರ್ಮಿಗಳ ತಂಡ ಅವರ ಮೇಲೆ ತಲವಾರು ದಾಳಿ ನಡೆಸಿದೆ. ಅವರ ಪರಿಸ್ಥಿತಿ ಚಿಂತಾಜನಕವಾಗಿದೆ.
ಈ ಕೃತ್ಯದ ಹಿಂದೆ ಇರುವ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಬೇಕು. ಘಟನೆಗೆ ಕಾರಣ ಏನೆಂಬುದನ್ನು ಕೂಲಂಕಷವಾಗಿ ತನಿಖೆ ನಡೆಸಿ ಸತ್ಯ ವಿಚಾರ ಹೊರತೆಗೆಯಬೇಕು ಎಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯನ್ನು ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸಮಿತಿ ಆಗ್ರಹಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನಷ್ಟು ಸುದ್ದಿಗಳು
ಅಲ್-ಮದೀನತುಲ್ ಮುನವ್ವರ: ಮುಬಾರಕಿಯ್ಯಾ ಮಹಾಸಭೆ
ವಿದ್ಯಾರ್ಥಿ ವೇತನ ಸಮಸ್ಯೆ : ಬ್ಯಾರಿ ಮಹಾಸಭಾ ವೇದಿಕೆಯಿಂದ ಅಲ್ಪಸಂಖ್ಯಾತ ಅಧ್ಯಕ್ಷರ ಭೇಟಿ
ಎಸ್ಸೆಸ್ಸೆಫ್ ವಿಟ್ಲ ಡಿವಿಷನ್ ಸಮಿತಿ 2021ನೇ ಸಾಲಿನ ಪದಾಧಿಕಾರಿಗಳ ಆಯ್ಕೆ
ಇಹ್ಸಾನ್ ಸೆಂಟರ್, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಜನವರಿ 17ಕ್ಕೆ
ಶಾಫೀ ಸಅದಿಯವರ ಮೇಲಿನ ಸುಳ್ಳಾರೋಪ: ರಾಜ್ಯ SYS ಖಂಡನೆ
ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ಗೆ ನೂತನ ಸಾರಥ್ಯ