ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮತ್ತೆ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನ.25ರಿಂದ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ನ.25ರಂದು ಸಾಧಾರಣ ಮಳೆಯಾದರೆ, ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ರಾಮನಗರದಲ್ಲಿ ನ.26ರಂದು ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ಏರಿಳಿತವಾಗುತ್ತಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಈ ಹಿಂದೆ ದೀಪಾವಳಿ ದಿನವೂ ರಾಜ್ಯದಲ್ಲಿ ಮಳೆ ಸುರಿದು ಹಬ್ಬದ ಸಂಭ್ರಮವನ್ನು ಮಂಕಾಗಿಸಿತ್ತು. ಪಟಾಕಿ ಸದ್ದನ್ನೂ ಕೊಂಚ ಅಡಗಿಸಿದ್ದ ಮಳೆ ನ.18 ಮತ್ತು 19ರಂದು ರಾಜ್ಯದಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಿತ್ತು. ಇದೀಗ ಮತ್ತೆ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ