ಮಂಗಳೂರು: ನ.17 ರಿಂದ ಕಾಲೇಜುಗಳು ಪುನಾರಂಭಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳ ಪೈಕಿ 29 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಧೃಡವಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ರಾಮಚಂದ್ರ ಬಾಯಿರಿ ಈ ಬಗ್ಗೆ ಖಚಿತ ಪಡಿಸಿದ್ದಾರೆ.
ಶನಿವಾರ 16,641 ವಿದ್ಯಾರ್ಥಿಗಳ ಗಂಟಲು ದ್ರವ ಮಾದರಿಯ ಪರೀಕ್ಷೆ ನಡೆದಿದ್ದು, ಈ ಪೈಕಿ 29 ಮಂದಿ ವಿದ್ಯಾರ್ಥಿಗೆ ಕೊರೊನಾ ಸೋಂಕು ತಗುಲಿರುವುದು ಧೃಡವಾಗಿದೆ. ರಾಜ್ಯದಲ್ಲಿ ನ.17 ರಿಂದ ಕಾಲೇಜುಗಳು ಪುನಾರಂಭಗೊಂಡಿದ್ದು ಕಾಲೇಜುಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಲಾಗಿದೆ.
ಕಾಲೇಜು ಆರಂಭವಾದಾಗಿನಿಂದ 120ರಿಂದ 130 ವಿದ್ಯಾರ್ಥಿಗಳಿಗೆ ಕೋವಿಡ್ 19 ದೃಢಪಟ್ಟಿದೆ. ಯುವ ಜನತೆಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿರುತ್ತದೆ ಎಂಬ ಹಿನ್ನೆಲೆಯಲ್ಲಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ರೂಪಿಸುವ ಜವಾಬ್ದಾರಿ ಸರ್ಕಾರದ ಮೇಲಿರುವುದರಿಂದ ಕಾಲೇಜುಗಳನ್ನು ಆರಂಭಿಸಿದ್ದೇವೆ. ಸೋಂಕು ಹೆಚ್ಚಳವಾದರೆ ಕಾಲೇಜುಗಳನ್ನು ಬಂದ್ ಮಾಡುತ್ತೇವೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.
ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರಾರ್ಥಿಗಳಿಗೆ ಕೋವಿಡ್ ಲಸಿಕೆ ಕಡ್ಡಾಯ- ಸೌದಿ ಹಜ್, ಉಮ್ರಾ ಸಚಿವ
ಸುರತ್ಕಲ್: ಸೋಶಿಯಲ್ ಮೀಡಿಯಾ ಮೂಲಕ ಹನಿಟ್ರ್ಯಾಪ್- ನಾಲ್ವರ ಬಂಧನ
ಯುಪಿ:ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ- ಬಂಧಿತ ಬಿಜೆಪಿ ನಾಯಕನಿಗೆ ಹಲವು ಕ್ರಿಮಿನಲ್ ಹಿನ್ನೆಲೆ
ಸೌದಿ: ಒಂದೇ ವಾರದಲ್ಲಿ 20 ಸಾವಿರ ಕೋವಿಡ್ ಪ್ರೋಟೋಕಾಲ್ ಉಲ್ಲಂಘನೆ
ಇಸ್ರೇಲ್- ಯುಎಇ ವೀಸಾ ರಹಿತ ಪ್ರಯಾಣ ಒಪ್ಪಂದ ರದ್ದು
ವಾಟ್ಸಾಪ್ ಹೊಸ ಫೀಚರ್- ಅನಗತ್ಯ ಮೆಸೇಜ್ ತಾನಾಗಿಯೇ ಡಿಲೀಟ್