ನವದೆಹಲಿ: ಕೇಂದ್ರ ಸರ್ಕಾರ ಕೋವಿಡ್-19 ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು ಡಿ.1 ರಿಂದ ಜಾರಿಗೆ ಬರಲಿದೆ.
ಹೊಸ ಮಾರ್ಗಸೂಚಿಯಲ್ಲಿ ಕೇಂದ್ರ ಗೃಹ ಸಚಿವಾಲಯ ರಾಜ್ಯಗಳಿಗೆ ನಿಯಂತ್ರಕ ಕ್ರಮಗಳನ್ನು, ಜನ ಸಂದಣಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸೂಚಿಸಿದೆ.
ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ತಮ್ಮ ಪರಿಸ್ಥಿತಿಗೆ ಅನುಗುಣವಾಗಿ ಕೋವಿಡ್-19 ನಿಯಂತ್ರಣಕ್ಕೆ ಸ್ಥಳೀಯವಾಗಿ ಕಂಟೈನ್ಮೆಂಟ್ ಜೋನ್ ಗಳಲ್ಲಿ ರಾತ್ರಿ ವೇಳೆ ಕರ್ಫ್ಯೂ ವಿಧಿಸುವಂತಹ ನಿರ್ಬಂಧಗಳನ್ನು ಜಾರಿಗೊಳಿಸಬಹುದಾಗಿದೆ, ಆದರೆ ಕಂಟೈನ್ಮೆಂಟ್ ಜೋನ್ ಗಳ ಹೊರತಾಗಿಯೂ ಸ್ಥಳೀಯ ಲಾಕ್ ಡೌನ್ ವಿಧಿಸುವುದಕ್ಕೆ ಕೇಂದ್ರ ಸರ್ಕಾರದಿಂದ ರಾಜ್ಯಗಳು ಅನುಮತಿ ಪಡೆಯುವುದನ್ನು ಹೊಸ ಮಾರ್ಗಸೂಚಿಯಲ್ಲಿ ಕಡ್ಡಾಯಗೊಳಿಸಲಾಗಿದೆ.
ಕಂಟೈನ್ಮೆಂಟ್ ಜೋನ್ ಗಳ ಪಟ್ಟಿಯನ್ನು ಜಿಲ್ಲಾಧಿಗಳು ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾರೆ. ಈ ಪಟ್ಟಿಯನ್ನು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯದೊಂದಿಗೂ ಹಂಚಿಕೊಳ್ಳಲಾಗುತ್ತದೆ.
ಕಂಟೈನ್ಮೆಂಟ್ ಜೋನ್ ಗಳಲ್ಲಿ ಪ್ರೊಟೋಕಾಲ್ ಗೆ ಅನುಗುಣವಾಗಿ ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗುತ್ತದೆ.
















ಇನ್ನಷ್ಟು ಸುದ್ದಿಗಳು
ಭಯ ಬೇಡ: ಭಾರತದಲ್ಲಿ ಕೆಲವು ಕ್ಯಾನ್ಸರ್ ಅನ್ನು ತಡೆಗಟ್ಟಲು ಸಾಧ್ಯ- ವಿಶ್ವ ಆರೋಗ್ಯ ಸಂಸ್ಥೆ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಸೌದಿ ಅರೇಬಿಯಾದಲ್ಲಿ ಹೃದಯಾಘಾತ ಮರಣ ಸಂಖ್ಯೆ ಹೆಚ್ಚಳ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದ ಸ ಹಿ ಉ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ರಾಜ್ಯದಲ್ಲೂ ಕೊರೋನಾ ಮುನ್ನೆಚ್ಚರಿಕೆ: ಮಾಸ್ಕ್ ಕಡ್ಡಾಯ- ಸಚಿವ ಡಾ.ಕೆ.ಸುಧಾಕರ್
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಕಣಚೂರು ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ- ಫೆ 28 ರಿಂದ
ಗಂಭೀರ ಕಾಯಿಲೆಗಳಿದ್ದರೆ ಮಾತ್ರ ಆಸ್ಪತ್ರೆಗೆ ಭೇಟಿ ನೀಡಿ- ಆರೋಗ್ಯ ಇಲಾಖೆ
ಲಾಕ್ ಡೌನ್ ಇಲ್ಲ, ಓಮಿಕ್ರಾನ್ ಬಗ್ಗೆ ಆಲಕ್ಷ್ಯ ಬೇಡ- ಆರೋಗ್ಯ ಸಚಿವ ಡಾ.ಕೆ ಸುಧಾಕರ್