ಯುಎಇ: ಕರ್ನಾಟಕ ಕಲ್ಚರಲ್ ಫೌಂಡೇಶನ್ ಯುಎಇ ವತಿಯಿಂದ ಯುಎಇಯ 49 ನೇ ರಾಷ್ಟ್ರೀಯ ದಿನಾಚರಣೆಯನ್ನು ಡಿಸೆಂಬರ್ 2 ರಂದು ಝೂಮ್ ಎಪ್ಲಿಕೇಶನ್ ಮೂಲಕ ನಡೆಸಲಾಗುವುದಾಗಿ ಯುಎಇ ರಾಷ್ಟ್ರೀಯ ಅಧ್ಯಕ್ಷ ಅಬ್ದುಲ್ ಜಲೀಲ್ ನಿಝಾಮಿ ದುಬೈ ತಿಳಿಸಿದ್ದಾರೆ.
ಮಾನವೀಯ ಮೌಲ್ಯಗಳಿಗೆ ಬೆಲೆ ಕಲ್ಪಿಸುವ ಯುಎಇಯಲ್ಲಿ ಲಕ್ಷಾಂತರ ಅನಿವಾಸಿ ಕನ್ನಡಿಗರು ಉದ್ಯಮಿಗಾಳಾಗಿ ಹಾಗೂ ವಿವಿಧ ಹುದ್ದೆಗಳಲ್ಲಿ ತೊಡಗಿಸಿಕೊಂಡು ಜೀವನ ಸಾಗಿಸುತ್ತಿದ್ದಾರೆ. 49ನೇ ಯುಎಇ ರಾಷ್ಟ್ರೀಯ ದಿನಾಚರಣೆಯನ್ನು #ThankyouUAE ಹೆಸರಿನಲ್ಲಿ ಆಯೋಜಿಸಿದ್ದು ಡಿಸೆಂಬರ್ 2 ರಂದು ಸಂಭ್ರಮದಿಂದ ಆಚರಿಸಲು ಸಜ್ಜಾಗಿ ನಿಂತಿದೆ.

ಕಳೆದ 7 ವರ್ಷಗಳಿಂದ ಕೆಸಿಎಫ್ ಯುಎಇಯಲ್ಲಿ ಕಾರ್ಯಾಚರಿಸುತ್ತಿದ್ದು ಹಲವಾರು ಸಾಮಾಜಿಕ ಶೈಕ್ಷಣಿಕ ಕಾರ್ಯಕ್ರಮಗಳೊಂದಿಗೆ ಯಶಸ್ಸಿನ ಹಾದಿಯಲ್ಲಿ ಮುನ್ನಡೆಯುತ್ತಿದೆ. #ThankyouUAe ಯುಎಇ 49 ನೇ ರಾಷ್ಟ್ರೀಯ ದಿನದ ಪ್ರಯುಕ್ತ ಡಿಸೆಂಬರ್ 2 ರಂದು ಮಧ್ಯಾಹ್ನ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ವಿರೋಧ ಪಕ್ಷದ ನಾಯಕ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಹಾಗೂ ವಿಧಾನಸಭೆ ಮಾಜಿ ಸ್ಪೀಕರ್ ಸನ್ಮಾನ್ಯ ಶ್ರೀ ರಮೇಶ್ ಕುಮಾರ್, ಎಮಿರೇಟ್ಸ್ ನ ಖ್ಯಾತ ಬರಹಗಾರ ಅಹ್ಮದ್ ಇಬ್ರಾಹೀಂ ದುಬೈ, ಜಿ.ಎ ಬಾವಾ, ಕರ್ನಾಟಕ ವಕ್ಫ್ ಬೋರ್ಡ್ ಸದಸ್ಯ ಶಾಫೀ ಸಅದಿ ಬೆಂಗಳೂರು, ಕೆಸಿಎಫ್ ಅಂತರಾಷ್ಟ್ರೀಯ ಅಧ್ಯಕ್ಷ ಡಾ। ಶೈಖ್ ಬಾವಾ ಹಾಜಿ ಮಂಗಳೂರು, ಜನರಲ್ ಸೆಕ್ರೆಟರಿ ಕಮರುದ್ದೀನ್ ಗೂಡಿನಬಳಿ ಭಾಗವಹಿಸಲಿದ್ದಾರೆ ಎಂದು ಕೆಸಿಎಫ್ ಮೀಡಿಯಾ ಮತ್ತು ಪಬ್ಲಿಕೇಶನ್ ವಿಭಾಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ