janadhvani

Kannada Online News Paper

ಮಂಗಳೂರು: ಮಂಗಳೂರು ನಗರದಲ್ಲಿ ಉಗ್ರರ ಪರ ಗೋಡೆ ಬರಹ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ತೀರ್ಥಹಳ್ಳಿಯ ನಝೀರ್ ಮೊಹಮ್ಮದ್ (26) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ವಿಚಾರಣೆಗೊಳಪಡಿಸಿದ್ದಾರೆ.

ಆರೋಪಿಯು ಮಂಗಳೂರಿನಲ್ಲೇ ಆನ್’ಲೈನ್ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ. ಸಿಸಿಟಿವಿಯಲ್ಲಿ ಲಭಿಸಿದ ಮಾಹಿತಿಯಂತೆ, ಮೊಬೈಲ್ ದಾಖಲೆ ಆಧರಿಸಿ ಬಂಧನಕ್ಕೊಳಪಡಿಸಲಾಗಿದೆ ಎಂದು ಹೇಳಲಾಗುತ್ತಿದೆ.

error: Content is protected !! Not allowed copy content from janadhvani.com