ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಶನ್ ಚುನಾವಣೆಯಲ್ಲಿ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ ಎಸ್ ) ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.ಪ್ರತಿಪಕ್ಷವಾದ ಭಾರತೀಯ ಜನತಾ ಪಾರ್ಟಿ 48 ವಾರ್ಡ್ ಗಳನ್ನು ಗೆಲ್ಲುವುದರ ಮೂಲಕ ಮಹತ್ಸಾಧನೆ ಮಾಡಿದೆ.
ಇಂದು ನಡೆದ ಮತ ಎಣಿಕೆಯ ಫಲಿತಾಂಶದಲ್ಲಿ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ ( ಟಿಆರ್ ಎಸ್ ) ನಿರಾಸೆಗೊಂಡಿದ್ದು, 150 ವಾರ್ಡ್ ಗಳ ಪೈಕಿ ಕೇವಲ 56 ವಾರ್ಡ್ ಗಳಲ್ಲಿ ಜಯ ಸಾಧಿಸಿದೆ. ಅಸದುದ್ದೀನ್ ಒವೈಸಿ ನೇತೃತ್ವದ ಎಐಎಂಐಎಂ 44 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
ಆಡಳಿತಾರೂಢ ಟಿಆರ್ ಎಸ್, ಬಿಜೆಪಿ ಮತ್ತು ಅಸದುದ್ದೀನ್ ಒವೈಸಿ ನೇತೃತ್ವದ ಅಖಿಲ ಭಾರತ ಮಜ್ಲಿಸ್ -ಎ- ಇತ್ತಿಹಾದುಲ್ ಮುಸ್ಲಿಮೀನ್ ನಡುವೆ ತೀವ್ರ ಪೈಪೋಟಿ ಹೊಂದಿದ್ದ ನಗರಪಾಲಿಕೆ ಚುನಾವಣೆಯಲ್ಲಿ ಶೇ.46.55 ರಷ್ಟು ಮತದಾರರು ಮತ ಚಲಾಯಿಸಿದ್ದಾರೆ.
2016 ರ ಚುನಾವಣೆಯಲ್ಲಿ 88 ಸ್ಥಾನಗಳನ್ನು ಗೆದ್ದಿದ್ದ ಟಿಆರ್ಎಸ್ – ಕಾರ್ಯಕ್ಷಮತೆಯ ಕುಸಿತವನ್ನು ವಿಶ್ಲೇಷಿಸುವುದಾಗಿ ಹೇಳಿದೆ. ಪಕ್ಷವು 20-25 ಸ್ಥಾನಗಳನ್ನು ಕಳಕೊಂಡಿದೆ ಎಂದು ಟಿಆರ್ಎಸ್ ಕಾರ್ಯಕಾರಿ ಅಧ್ಯಕ್ಷ ಕೆ.ಟಿ.ರಾಮರಾವ್ ಹೇಳಿದರು. “ನಾವು ಬಯಸಿದ ಫಲಿತಾಂಶವನ್ನು ಗಳಿಸಲಾಗಿಲ್ಲ ಏಕೆ ಎಂಬುದರ ಕುರಿತು ನಾವು ವಿಶ್ಲೇಷಣೆ ನಡೆಸಿ ಸಮಸ್ಯೆಗಳನ್ನು ಬಗೆಹರಿಸುತ್ತೇವೆ” ಎಂದು ಅವರು ಹೇಳಿದರು.
















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ