ಹಳೆಯಂಗಡಿ,ಡಿ.06: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಕೆನರಾ ಬ್ಯಾಂಕ್ ಬಳಿ ಟೆಂಪೋ ಡಿಕ್ಕಿಯಾಗಿ ಪಾದಾಚರಿಗಳಾದ ತಾಯಿ ಮತ್ತು ಮಗ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಗೊಂಡವರನ್ನು ಹಳೆಯಂಗಡಿ ನಿವಾಸಿಗಳಾದ ಸುಕಲತಾ ಮತ್ತು ಚಿರಾಗ್ ಎಂದು ಗುರುತಿಸಲಾಗಿದೆ.
ಟೆಂಪೋ ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದು, ಹಳೆಯಂಗಡಿ ಸಮೀಪಿಸುತ್ತಿದಂತೆಯೇ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದು ಬಳಿಕ ಹೆದ್ದಾರಿಯ ಡಿವೈಡರ್ ಮೇಲೇರಿ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿದೆ.ಅಪಘಾತದಿಂದ ಚಾಲಕ ಪವಾಡಸದೃಶ ಪಾರಾಗಿದ್ದಾನೆ. ಗಂಭೀರ ಗಾಯಗೊಂಡ ತಾಯಿ ಮತ್ತು ಮಗನನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಪಘಾತಕ್ಕೆ ಟೆಂಪೋ ಚಾಲಕ ನ ನಿರ್ಲಕ್ಷ್ಯ ದ ಚಾಲನೆಯೇ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
ವರದಿ: ಅದ್ದಿ ಬೊಳ್ಳೂರು
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್