ಬೆಂಗಳೂರು, ಡಿ 21-ದಕ್ಷಿಣ ಇಂಗ್ಲೆಂಡ್ನಲ್ಲಿ ಕಂಡು ಬರುತ್ತಿರುವ ಹೊಸ ಸ್ವರೂದ ವೈರಸ್ ಮತ್ತೊಮ್ಮೆ ಜಗತ್ತಿನಲ್ಲಿ ಆತಂಕ ಮೂಡಿಸಿದೆ. ಶೀಘ್ರವಾಗಿ ಹರಡುವ ಈ ವೈರಸನ್ನು ತಡೆಯುವ ಉದ್ದೇಶದಿಂದ ಈಗಾಗಲೇ ಭಾರತ ಸೇರಿದಂತೆ ಯುರೋಪಿನ ಅನೇಕ ರಾಷ್ಟ್ರಗಳು ಇಂಗ್ಲೆಡ್ ವಿಮಾನಯಾನವನ್ನು ರದ್ದು ಪಡಿಸಿದೆ.
ಈ ನಿಟ್ಟಿನಲ್ಲಿ ಬ್ರಿಟನ್ ನಿಂದ ಆಗಮಿಸುವ ಪ್ರಯಾಣಿಕರ ಬಗ್ಗೆ ತೀವ್ರ ನಿಗಾವಹಿಸಲು ಮುಂದಾಗಿರುವ ರಾಜ್ಯ ಸರ್ಕಾರ ಅವರನ್ನು 14 ದಿನಗಳ ಕಾಲ ಸಾಂಸ್ಥಿಕ ಕ್ಚಾರಂಟೈನ್ ಗೆ ಒಳಪಡಿಸಲು ತೀರ್ಮಾನಿಸಿದೆ.ಇಂಗ್ಲೆಂಡ್ನಿಂದ ಬಂದವರು ಒಂದು ವಾರಗಳ ಹೋಮ್ ಕ್ವಾರಂಟೈನ್ನಲ್ಲಿರಬೇಕು ಎಂದು ಆರೋಗ್ಯ ಸಚಿವ ಕೆ ಸುಧಾಕರ್ ತಿಳಿಸಿದ್ದಾರೆ.
ಇಂಗ್ಲೆಂಡ್, ನೆದರ್ಲೆಂಡ್, ಇಂಗ್ಲೆಂಡ್ ನಿಂದ ಬರುವವರಿಗೆ ನಿಷೇಧ ಮಾಡಲಾಗಿದೆ. ಬೇರೆ ದೇಶಗಳ ಬಗ್ಗೆ ಇನ್ನೂ ಕಟ್ಟು ನಿಟ್ಟಿಲ್ಲ. ಬ್ರಿಟಿಷ್ ಏರ್ ವೇಸ್ ನ 49 ಪ್ರಯಾಣಿಕರು ಟೆಸ್ಟ್ ಮಾಡಿಸಿಲ್ಲ. ನಿನ್ನೆ ಇಂದು ಒಟ್ಟು138 ಜನ ಬೆಂಗಳೂರಿಗೆ ಬಂದಿದ್ದಾರೆ. ಇವರೆಲ್ಲರನ್ನ ಟ್ರೇಸ್ ಮಾಡಲು ಈಗಾಗಲೇ ಕ್ರಮ ಕೈಗೊಳ್ಳಲಾಗುತ್ತವೆ. ಇಂಗ್ಲೆಂಡ್ ನಿಂದ ಬಂದವರಿಗೆ ಮಾತ್ರ ಒಂದು ವಾರ ಹೋಮ್ ಕ್ವಾರಂಟೈನ್ ನಲ್ಲಿರಬೇಕು. 14ದಿನಗಳಲ್ಲಿ ಯೂರೋಪ್ನಿಂದ ರಾಜ್ಯಕ್ಕೆ ಬಂದವರಿಗೆ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸುತ್ತೇವೆ ಎಂದರು.
ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ವಿಧಿಸುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಮತ್ತೆ ಲಾಕ್ ಡೌನ್ ಜಾರಿಗೊಳಿಸಿದರೆ ಅದು ಆತುರದ ನಿರ್ಧಾರವಾಗಲಿದೆ ಎಂದು ಸುಧಾಕರ್ ತಿಳಿಸಿದರುಎಚ್ಚರಿಕೆ ಇರಲಿ:
ಈ ವೈರಾಣು ಹರಡುವ ವೇಗ ಹೆಚ್ಚಿದೆ. ಆದರೆ ರೋಗ ತೀವ್ರವಾಗಿರುವುದಿಲ್ಲ. ಆದ್ದರಿಂದ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕಿದೆ. ಹೊಸ ವರ್ಷದ ಅದ್ದೂರಿ ಆಚರಣೆಗಳನ್ನು ಕೈಬಿಡಬೇಕಿದೆ. ಕೆಲ ಹೋಟೆಲ್ ಗಳಲ್ಲಿ ಬುಕಿಂಗ್ ಮಾಡಿ ಆಚರಣೆ ಮಾಡಲು ಸಿದ್ಧತೆ ನಡೆಸಿರುವುದು ಕಂಡುಬಂದಿದೆ. ಹೀಗೆ ಮಾಡಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ. ಸರ್ಕಾರಕ್ಕೆ ಜನರ ಆರೋಗ್ಯ ಮುಖ್ಯವಾಗಿದ್ದು, ಹೊಸ ಬಗೆಯ ವೈರಾಣು ಬರುವ ಸಂದರ್ಭದಲ್ಲಿ ಇನ್ನಷ್ಟು ಎಚ್ಚರಿಕೆಯಿಂದ ಇರಬೇಕು ಎಂದರು.
ಶೈಕ್ಷಣಿಕ ಚಟುವಟಿಕೆಗೆ ಸಂಬಂಧಿಸಿದಂತೆ ವಹಿಸಬೇಕಾದ ಎಚ್ಚರಿಕೆ ಕುರಿತು ಮತ್ತೊಮ್ಮೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.