“ಉತ್ತರ ಪ್ರದೇಶ ಸರ್ಕಾರದ ಕಾನೂನು ಬಾಹಿರ ಮತಾಂತರ ನಿಷೇಧ ಕಾಯ್ದೆಯು ರಾಜ್ಯವನ್ನು, ದ್ವೇಷ ರಾಜಕೀಯ, ವಿಭಜನೆ, ಧರ್ಮಾಂಧತೆಯ ಕೇಂದ್ರಬಿಂದುವಾಗಿ ಪರಿವರ್ತನೆಗೊಳಿಸಿದೆ”
ನವದೆಹಲಿ ,ಡಿ. 30:ಹಲವರ ವಿರೋಧದ ನಡುವೆಯೂ ಯೋಗಿ ಆದಿತ್ಯನಾಥ್ ಇತ್ತೀಚೆಗೆ ಲವ್ ಜಿಹಾದ್ ವಿರುದ್ಧ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದ್ದರು. ಈ ಕಾಯ್ದೆ ಜಾರಿಯಾಗುತ್ತಿದ್ದಂತೆ ಉತ್ತರಪ್ರದೇಶದಲ್ಲಿ ಇಸ್ಲಾಂ ಧರ್ಮಕ್ಕೆ ಸೇರಿದ ಹಲವರನ್ನು ಬಂಧಿಸಿ ಜೈಲಿಗಟ್ಟಲಾಗಿದೆ.ಹೀಗಾಗಿ ಇದು ಇಸ್ಲಾಂ ಧರ್ಮದವರನ್ನು ಗುರಿಯಾಗಿಸಿಕೊಂಡು ಜಾರಿಯಾಗಿರುವ ಕಾಯ್ದೆ ಎಂದೇ ಹಲವು ಪ್ರಗತಿಪರರು ಆರೋಪಿಸುತ್ತಿದ್ದಾರೆ.
ಈ ನಡುವೆ “ಉತ್ತರ ಪ್ರದೇಶ ಸರ್ಕಾರದ ಕಾನೂನು ಬಾಹಿರ ಮತಾಂತರ ನಿಷೇಧ ಕಾಯ್ದೆಯು ರಾಜ್ಯವನ್ನು, ದ್ವೇಷ ರಾಜಕೀಯ, ವಿಭಜನೆ, ಧರ್ಮಾಂಧತೆಯ ಕೇಂದ್ರಬಿಂದುವಾಗಿ ಪರಿವರ್ತನೆಗೊಳಿಸಿದೆ” ಎಂದು ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಶಿವಶಂಕರ್ ಮೆನನ್, ಮಾಜಿ ವಿದೇಶಾಂಗ ಕಾರ್ಯದರ್ಶಿ ನಿರುಪಮಾ ರಾವ್ ಸೇರಿದಂತೆ 104 ಮಾಜಿ ಐಎಎಸ್ ಅಧಿಕಾರಿಗಳು ಮುಖ್ಯಮಂತ್ರಿ ಆದಿತ್ಯನಾಥ್ಗೆ ಪತ್ರ ಬರೆದಿದ್ದಾರೆ. ಈ ಸುದ್ದಿ ಇದೀಗ ರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಸದ್ದು ಮಾಡುತ್ತಿದೆ.
ಈ ವಿವಾದಾತ್ಮಕ ಕಾಯ್ದೆಯನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿರುವ ಮಾಜಿ ಐಎಎಸ್ ಅಧಿಕಾರಿಗಳು, “ಸಂವಿಧಾನವನ್ನು ಎತ್ತಿಹಿಡಿಯುವುದಾಗಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿ ಸೇರಿದಂತೆ ಎಲ್ಲ ರಾಜಕಾರಣಿಗಳು ಸಂವಿಧಾನದ ಬಗ್ಗೆ ಅರಿವುಮೂಡಿಸಿಕೊಳ್ಳುವ ಅಗತ್ಯವಿದೆ” ಎಂದಿದ್ದಾರೆ.
“ಒಂದು ಕಾಲದಲ್ಲಿ ಗಂಗಾ-ಯಮುನಾ ನಾಗರಿಕತೆಯ ತೊಟ್ಟಿಲಾಗಿದ್ದ ಉತ್ತರಪ್ರದೇಶ, ಈಗ ರಾಜಕೀಯ ದ್ವೇಷ, ವಿಭಜನೆ, ಧರ್ಮಾಂಧತೆಯ ಕೇಂದ್ರವಾಗಿದೆ. ರಾಜ್ಯಾಡಳಿತ ಕೋಮು ವಿಷವನ್ನು ಕಕ್ಕುತ್ತಿದೆ. ಉತ್ತರಪ್ರದೇಶದಾದ್ಯಂತ ಯುವ ಭಾರತೀಯರ ಮೇಲೆ ನಿಮ್ಮ ಆಡಳಿತ ಹೀನಾಯವಾಗಿ ದೌರ್ಜನ್ಯ ನಡೆಸಿದೆ. ಅಮಾಯಕ ದಂಪತಿಯನ್ನು ದಾಳಿಕೋರರು ವಿಚಾರಣೆ ನಡೆಸಿದಾಗ ಹಾಗೂ ಕಿರುಕುಳ ನೀಡಿದಾಗ ಮೂಕ ಪ್ರೇಕ್ಷಕರಾಗಿದ್ದ ಪೊಲೀಸರು ಕ್ಷಮೆಗೆ ಅರ್ಹರಲ್ಲ” ಎಂದು ಮಾಜಿ ಐಎಎಸ್ ಅಧಿಕಾರಿಗಳು ಪತ್ರದಲ್ಲಿ ಹೇಳಿದ್ದಾರೆ.
ಇತ್ತೀಚೆಗೆ ರಾಜ್ಯದಲ್ಲಿ ‘ಲವ್ ಜಿಹಾದ್’ ಎನ್ನುವ ಅಸಾಂವಿಧಾನಿಕ ಪದವನ್ನು ಬಳಸಿ ಅಮಾಯಕರನ್ನು ಅದರ ಬಲಿಪಶುಗಳನ್ನಾಗಿ ಮಾಡಲಾಗುತ್ತಿದೆ. ಈ ಕಾನೂನನ್ನು ಹಿಂದೂ ಸಂಘಟನೆಗಳು ಸ್ವೇಚ್ಚೆಯಾಗಿ ಬಳಸಿಕೊಳ್ಳುತ್ತಿದೆ. ಈ ಕುರಿತು ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ, ಯೋಗಿ ಆದಿತ್ಯನಾಥ್ ಸರ್ಕಾರ ಮಾತ್ರ ಈ ಕುರಿತು ತಲೆ ಕೆಡೆಸಿಕೊಳ್ಳುತ್ತಿಲ್ಲ ಎಂಬ ಆರೋಪವಿದೆ.
ಆದರೆ, ಅಲಹಾಬಾದ್ ಹೈಕೋರ್ಟ್ ಸೇರಿದಂತೆ ಇತರೆ ನ್ಯಾಯಾಲಯಗಳು ಈ ಕಾನೂನನ್ನು ವಿಮರ್ಶಿಸಿವೆ. ಯಾವುದೆ ಒಬ್ಬ ವಯಸ್ಕ ಯುವತಿ ತನ್ನ ಇಚ್ಚೆಗೆ ಅನುಗುಣವಾಗಿ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಹೇಳಿದೆ.ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಮದನ್ ಬಿ ಲೋಕೂರ್ ಸೇರಿದಂತೆ ನಾಲ್ವರು ಮಾಜಿ ನ್ಯಾಯಾಧೀಶರು ಈ ಸುಗ್ರೀವಾಜ್ಞೆಯನ್ನು ಟೀಕಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ