janadhvani

Kannada Online News Paper

ವಿಟ್ಲ: ಮಹಿಳೆಯನ್ನು ಕಟ್ಟಿ ಹಾಕಿ ದರೋಡೆ- ಪ್ರಕರಣಕ್ಕೆ ಹೊಸ ತಿರುವು

ವಿಟ್ಲ, ಜ.6:- ಮನೆಯಲ್ಲಿ ಯಾರು ಇಲ್ಲದಾಗ ದುಷ್ಕರ್ಮಿಗಳು ಕಟ್ಟಿ ಹಾಕಿ ದರೋಡೆ ನಡೆಸಿದ್ದಾರೆ ಎಂದು ಮಹಿಳೆಯೊಬ್ಬರು ನಾಟಕವಾಡಿದ ಪ್ರಕರಣವನ್ನು ಬೇಧಿಸುವಲ್ಲಿ ವಿಟ್ಲ ಠಾಣಾ ಪೊಲೀಸರ ತಂಡ ಯಶಸ್ವಿಯಾಗಿದೆ.

ಆಟೋ ಚಾಲಕ ರಫೀಕ್ ಹಾಗೂ ಆತನ ಪುತ್ರ ಮಧ್ಯಾಹ್ನ ನಮಾಜಿಗೆ ತೆರಳಿದ್ದ ಸಂದರ್ಭದಲ್ಲಿ ಮನೆಯೊಳಗೆ ನುಗ್ಗಿದ ವ್ಯಕ್ತಿ ಜೈನಾಬಿಯನ್ನು ಕಟ್ಟಿ ಹಾಕಿ, ಮೈಮೇಲಿದ್ದ ಕಿವಿಯೊಲೆ, ಉಂಗುರ ಹಾಗೂ ಚೈನ್ ಕಿತ್ತುಕೊಂಡು ಮುಂಭಾಗಿಲಿನ ಚಿಲಕ ಹಾಕಿ ಹಿಂಬದಿ ಬಾಗಿಲಿನಿಂದ ಪರಾರಿಯಾಗಿದ್ದಾನೆಂದು ದೂರಿನಲ್ಲಿ ಜೈನಾಬಿ ವಿವರಿಸಿದ್ದಳು. ಈ ಸಂದರ್ಭದಲ್ಲಿ ಮಹಿಳೆಯೇ ಚಿನ್ನವನ್ನು ಬೇರೆಡೆಗೆ ಸಾಗಿಸಿದ್ದು ಬೆಳಕಿಗೆ ಬಂದಿದೆ.ಮನೆಯ ಪಕ್ಕದಲ್ಲಿ ವಾಸವಿರುವ ಪ್ರಿಯಕರನ ಕಾಟಕ್ಕೆ ಬಾಡಿಗೆ ಮನೆ ಬದಲಿಸುವ ನಿರ್ಧಾರಕ್ಕೆ ಬಂದಿದ್ದು, ಯಾವ ರೀತಿಯಿಂದ ಹೇಳಿದರೂ, ಒಪ್ಪದಾಗ ದರೋಡೆಯ ನಾಟಕಕ್ಕೆ ಮುಂದಾಗಿದ್ದಾಳೆನ್ನಲಾಗಿದೆ.

ಬಂಟ್ವಾಳ ಸಹಾಯಕ ಅಧೀಕ್ಷಕ ವೆಲೆಂಟನ್ ಡಿಸೋಜ್ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಟಿ. ಡಿ. ನಾಗರಾಜ್ ಅವರ ನೇತೃತ್ವದಲ್ಲಿ ವಿಟ್ಲ ಠಾಣಾ ಉಪನಿರೀಕ್ಷಕ ವಿನೋದ್ ರೆಡ್ಡಿ, ಸಿಬ್ಬಂದಿಗಳಾದ ಪ್ರಸನ್ನ, ಜಯಕುಮಾರ್, ಪ್ರತ್ತಾಪ, ವಿನಾಯಕ, ಹೇಮರಾಜ್ ಅವರ ತಂಡ ಕಾರ್ಯಚರಣೆ ನಡೆಸಿ, ಬಂಗಾರವನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಪೊಲೀಸ್ ತನಿಖೆ ತೀವ್ರಗೊಳ್ಳುತ್ತಿದ್ದಂತೆ ಭಯಗೊಂಡ ಮಹಿಳೆ ಅದನ್ನು ಬೇರೆಡೆಗೆ ತೆಗೆದುಕೊಂಡು ಹೋಗಿ ಎಸೆದಿದ್ದಾಳೆನ್ನಲಾಗಿದೆ. ಭಾಗಶಃ ಬಂಗಾರವನ್ನು ವಶಕ್ಕೆ ಪಡೆಯಲಾಗಿದೆ.

error: Content is protected !! Not allowed copy content from janadhvani.com